ಬೆಳಗಾವಿ: ಮದುವೆಯಾಗಲು ಹೆಣ್ಣು ಸಿಗದಿದ್ದಕ್ಕೆ ಮನನೊಂದು ಯುವ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಳಗಾವಿ ಜಿಲ್ಲೆ ಸುರೇಬಾನದ ಸಂಗಳ ಗ್ರಾಮದ ರೈತ ಶಿವನಗೌಡ ಬಸನಗೌಡ ಪಾಟೀಲ(28) ಆತ್ಮಹತ್ಯೆ ಮಾಡಿಕೊಂಡವರು.
ಶನಿವಾರ ಅವರು ಜಮೀನಿನಲ್ಲಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮದುವೆಯಾಗಲು ಹೆಣ್ಣು ಸಿಗಲಿಲ್ಲವೆಂದು ಮನನೊಂದಿದ್ದ ಶಿವನಗೌಡ ಮದ್ಯಪಾನ ಮಾಡಿ ಜಮೀನಿನಲ್ಲಿ ನೇಣಿಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.