HomeIndiaSHOCKING : ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವು : ವಿಡಿಯೋ ವೈರಲ್

SHOCKING : ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವು : ವಿಡಿಯೋ ವೈರಲ್

ನಾಯಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಜಿಗಿದು ಯುವಕ ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ಯುವಕನೊಬ್ಬ ಹೋಟೆಲ್ ನ ಮೂರನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಸೈಬರಾಬಾದ್ ಪೊಲೀಸ್ ಕಮಿಷನರೇಟ್ನ ಚಂದನಗರ ಪೊಲೀಸ್ ಠಾಣೆ ವ್ಯಾಪ್ತಿಯ ವಿವಿ ಪ್ರೈಡ್ ಕ್ಲಾಸಿಕ್ ಹೋಟೆಲ್ನಲ್ಲಿ ಭಾನುವಾರ ತಡರಾತ್ರಿ ಈ ಘಟನೆ ನಡೆದಿದ್ದು, 24 ಗಂಟೆಗಳ ನಂತರ ಬೆಳಕಿಗೆ ಬಂದಿದೆ.
ನೆರೆಯ ಆಂಧ್ರಪ್ರದೇಶದ ತೆನಾಲಿ ಮೂಲದ 23 ವರ್ಷದ ಉದಯ್ ತನ್ನ ಸ್ನೇಹಿತರೊಂದಿಗೆ ರಾಮಚಂದ್ರಪುರಂನ ಅಶೋಕ್ ನಗರ ಪ್ರದೇಶದಲ್ಲಿರುವ ಹೋಟೆಲ್ ಗೆ ತೆರಳಿದ್ದರು. ಅವರು ಹೋಟೆಲ್ ನ ಮೂರನೇ ಮಹಡಿಗೆ ಹೋದಾಗ, ಕಾರಿಡಾರ್ ನಲ್ಲಿ ನಾಯಿಯೊಂದು ಅವರ ಮೇಲೆ ದಾಳಿ ಮಾಡುತ್ತಿರುವುದನ್ನು ಕಂಡರು. ಯುವಕ ಭಯಭೀತನಾಗಿ ನಾಯಿಯಿಂದ ತಪ್ಪಿಸಿಕೊಳ್ಳಲು ಕಿಟಕಿಯ ಮೂಲಕ ಜಿಗಿದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯ ವಿಡಿಯೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular