HomeLatest NewsSHOCKING: RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

SHOCKING: RCB ಗೆಲುವಿನ ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿತ

ಬೆಂಗಳೂರು: ಐಪಿಎಲ್ ಫೈನಲ್ ನಲ್ಲಿ ಆರ್.ಸಿ.ಬಿ. ಗೆದ್ದ ಬಳಿಕ ಸಂಭ್ರಮಾಚರಣೆ ನಡೆಸುವಾಗ ದುಷ್ಕರ್ಮಿಗಳು ಕ್ರೌರ್ಯ ಮೆರೆದಿದ್ದು, ಯುವಕನಿಗೆ ಚಾಕುವಿನಿಂದ ಇರಿದಿದ್ದಾರೆ.

ಬೆಂಗಳೂರಿನ ಜಾಲಹಳ್ಳಿ ಕ್ರಾಸ್ ಬಳಿ ಘಟನೆ ನಡೆದಿದೆ. ಸಂಭ್ರಮಾಚರಣೆ ಮಾಡುತ್ತಾ ಬಾರ್ ಗೆ ತೆರಳುವಾಗ ಯುವಕನಿಗೆ ಚಾಕು ಇರಿದಿದ್ದಾರೆ. ಪ್ರತಿರೋಧ ತೋರುತ್ತಿದ್ದಂತೆ ಯುವಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.

ಕೂದಲೆಳೆ ಅಂತರದಲ್ಲಿ ಯುವಕ ಪ್ರಾಣಾಯದಿಂದ ಪಾರಾಗಿದ್ದಾನೆ. ಹಲ್ಲೆಗೊಳಗಾದ ಯುವಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೀಣ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular