ತುಮಕೂರು: ಚಾಕುವಿನಿಂದ ಇರಿದು ಯುವಕನೊಬ್ಬ ದೊಡ್ಡಪ್ಪನನ್ನು ಕೊಲೆ ಮಾಡಿದ ಘಟನೆ ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಅಂಕಲಕೊಪ್ಪ ಗ್ರಾಮದಲ್ಲಿ ನಡೆದಿದೆ.
50 ವರ್ಷದ ಕರೀಂ ಕೊಲೆಯಾದ ವ್ಯಕ್ತಿ. ಅವರ ತಮ್ಮನ ಮಗ ಆಫ್ರಿದಿ(25) ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಜಮೀನು ವಿಚಾರವಾಗಿ ಜಗಳ ನಡೆದು ದೊಡ್ಡಪ್ಪನಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿ ಅಫ್ರಿದಿ ಪರಾರಿಯಾಗಿದ್ದಾನೆ ಎಂದು ಹೇಳಲಾಗಿದೆ. ಘಟನಾ ಸ್ಥಳಖ್ಕೆ ಎಸ್ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಎಸ್ ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.