HomeLatest NewsBREAKING : ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಕೇಸ್ :...

BREAKING : ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಕೇಸ್ : ನಾಲ್ವರು ಆರೋಪಿಗಳು ಅರೆಸ್ಟ್.!

“ಬಾಲಿವುಡ್ ಆಕ್ಷನ್ ಡೈರೆಕ್ಟರ್ ರೋಹಿತ್ ಶೆಟ್ಟಿ ಅವರ ಮನೆಯ ಮುಂದೆ ರಿಯಲ್ ಆಕ್ಷನ್ ನಡೆದಿದೆ. ಭಾನುವಾರ ನಸುಕಿನ ಜಾವ ಜುಹುವಿನಲ್ಲಿರುವ ಅವರ ಮನೆಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ಚಿತ್ರರಂಗದಲ್ಲಿ ಆತಂಕ ಮೂಡಿಸಿದೆ.

ಹೌದು.ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಮನೆ ಮೇಲೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರು ಮಿಂಚಿನ ವೇಗದಲ್ಲಿ ಕಾರ್ಯಪ್ರವೃತ್ತರಾಗಿ ಪುಣೆಯಲ್ಲಿ ನಾಲ್ವರನ್ನು ಹೆಡೆಮುರಿ ಕಟ್ಟಿದ್ದಾರೆ. ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ (‘ಶೆಟ್ಟಿ ಟವರ್’) ಮುಂದೆ ಭಾನುವಾರ (ಫೆಬ್ರವರಿ 1, 2026) ಮುಂಜಾನೆ ಅನಾಮಧೇಯ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದಾರೆ.

ಬೈಕ್ನಲ್ಲಿ ಬಂದಿದ್ದ ದುಷ್ಕರ್ಮಿಗಳು ಸುಮಾರು 4 ಸುತ್ತು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಅದೃಷ್ಟವಶಾತ್ ಈ ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ.ಘಟನೆಯ ಗಾಂಭೀರ್ಯವನ್ನು ಅರಿತ ಮುಂಬೈ ಮತ್ತು ಪುಣೆ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ತನಿಖೆ ಆರಂಭಿಸಿದ ಕೆಲವೇ ಗಂಟೆಗಳಲ್ಲಿ ಪುಣೆಯಲ್ಲಿ ನಾಲ್ವರು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗಿದ್ದು, ಫೋರೆನ್ಸಿಕ್ ತಂಡ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಈ ದಾಳಿಯ ಹಿಂದೆ ಯಾವುದಾದರೂ ಭೂಗತ ಲೋಕದ ಕೈವಾಡವಿದೆಯೇ ಅಥವಾ ಬೆದರಿಕೆ ಉದ್ದೇಶವೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.ಘಟನೆಯ ನಂತರ ರೋಹಿತ್ ಶೆಟ್ಟಿ ಅವರ ನಿವಾಸದ ಸುತ್ತ ಭಾರಿ ಪೊಲೀಸ್ ಭದ್ರತೆಯನ್ನು ನಿಯೋಜಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular