
ಮಹಾರಾಷ್ಟ್ರದ ಪಾಲ್ಘರ್ ಬಳಿ ಚಲಿಸುತ್ತಿದ್ದ ಜೈಪುರ್ ಎಕ್ಸ್ ಪ್ರೆಸ್ ರೈಲಿನಲ್ಲಿ ಗುಂಡಿನ ದಾಳಿ ನಡೆದಿದ್ದು, ಆರ್ ಪಿಎಫ್ ಎಎಸ್ ಐ ಸೇರಿ ನಾಲ್ವರು ಮೃತಪಟ್ಟಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರೈಲು ಮುಂಬೈಗೆ ತೆರಳುತ್ತಿದ್ದಾಗ ದುಷ್ಕರ್ಮಿ ಯೋರ್ವ ಫೈರಿಂಗ್ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ಗುಂಡಿನ ದಾಳಿ ನಡೆಸಿದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

