ಹಾಡಹಗಲೇ ಜನನಿಬಿಡ ಪ್ರದೇಶದಲ್ಲಿ ಶೂಟೌಟ್; ಬೆಚ್ಚಿಬೀಳಿಸುತ್ತೆ ವಿಡಿಯೋ

ಹಾಡಹಗಲೇ ಮಧ್ಯಪ್ರದೇಶದ ಉಜ್ಜಯಿನಿಯ ಫ್ರೀಗಂಜ್‌ನ ಜನನಿಬಿಡ ರಸ್ತೆಯಲ್ಲಿ ವ್ಯಕ್ತಿಯೊಬ್ಬನಿಗೆ ಗುಂಡು ಹಾರಿಸಿ ಆರೋಪಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಗಾಯಗೊಂಡ ವ್ಯಕ್ತಿಯನ್ನು ರಾಜೇಶ್ ಅಲಿಯಾಸ್ ರಾಜು ದ್ರೋಣವತ್ ಎಂದು ಗುರುತಿಸಲಾಗಿದ್ದು, ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಫ್ರೀಗಂಜ್‌ನ ಪಾಟಿದಾರ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಹಿತಿಯ ಪ್ರಕಾರ ಆರೋಪಿಗಳು ಮತ್ತು ಸಂತ್ರಸ್ತ ಇಬ್ಬರೂ ಕ್ರಿಮಿನಲ್ ಹಿನ್ನೆಲೆ ಹೊಂದಿದ್ದಾರೆ ಮತ್ತು ಪರಸ್ಪರ ದ್ವೇಷಕ್ಕಾಗಿ ಈ ಶೂಟೌಟ್ ನಡೆದಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪೊಲೀಸ್ ವರಿಷ್ಠಾಧಿಕಾರಿ ಸಚಿನ್ ಶರ್ಮಾ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿ ಖಾಲಿ ಕಾಟ್ರಿಡ್ಜ್ ಗಳನ್ನು ವಶಪಡಿಸಿಕೊಂಡಿದ್ದು ತನಿಖೆ ಆರಂಭಿಸಿದ್ದಾರೆ.

ಇದರೊಂದಿಗೆ ಸಮೀಪದಲ್ಲಿ ಅಳವಡಿಸಲಾಗಿರುವ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಸಂಗ್ರಹಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read