BREAKING: ‘ಬಿಗ್ ಬಾಸ್’ಗೆ ಬಿಗ್ ಶಾಕ್: ಶೋ ನಿಲ್ಲಿಸುವಂತೆ ಕೋರ್ಟ್ ಗೆ ಅರ್ಜಿ

ಶಿವಮೊಗ್ಗ: ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ಗೆ ತಡೆ ನೀಡುವಂತೆ ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

‘ಬಿಗ್ ಬಾಸ್’ ಕಾರ್ಯಕ್ರಮದಲ್ಲಿ ಹೆಣ್ಣು ಮಕ್ಕಳ ಶೋಷಣೆ ಮಾಡಲಾಗುತ್ತಿದೆ ಎಂದು ಮಹಿಳಾ ಆಯೋಗದಿಂದ ಕ್ರಮಕ್ಕೆ ಸೂಚನೆ ನೀಡಲಾಗಿದೆ. ರಾಮನಗರ ಜಿಲ್ಲಾ ಪೊಲೀಸರು ‘ಬಿಗ್ ಬಾಸ್’ ಆಯೋಜಕರಿಗೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಮತ್ತೊಂದು ಘಟನೆ ನಡೆದಿದ್ದು, ನ್ಯಾಯಾಲಯಕ್ಕೆ ಇಂಜೆಕ್ಷನ್ ದಾವೆ ಸಲ್ಲಿಸಲಾಗಿದೆ.

‘ಬಿಗ್ ಬಾಸ್’ ಕಾರ್ಯಕ್ರಮ ಸಂಸಾರಿಕ ಮನೆಹಾಳು ಮಾಡುತ್ತಿದೆ. ಅದಕ್ಕೆ ತಡೆ ನೀಡಬೇಕೆಂದು ಕೋರಿ ಸಾಗರದ ವಕೀಲ ಕೆ.ಎಲ್. ಭೋಜರಾಜ್ ಇಂಜೆಕ್ಷನ್ ದಾವೆ ಸಲ್ಲಿಸಿದ್ದು, ಸಾಗರದ ಹೆಚ್ಚವರಿ ಸಿವಿಲ್ ನ್ಯಾಯಾಧೀಶರಾದ ಚಾಂದನಿ ಅವರು ತುರ್ತು ನೋಟೀಸ್ ಜಾರಿ ಮಾಡಿ ಮುಂದಿನ ವಿಚಾರಣೆಯನ್ನು ಅ. 28 ಕ್ಕೆ ನಿಗದಿಗೊಳಿಸಿದ್ದಾರೆ.

ಈ ಕುರಿತಾಗಿ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read