HomeLatest Newsಸಿಎಂ ಸಭೆಗೆ ಸತತ ಗೈರು: ಹಿರಿಯ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಶೋಕಾಸ್ ನೋಟಿಸ್

ಸಿಎಂ ಸಭೆಗೆ ಸತತ ಗೈರು: ಹಿರಿಯ ಐಎಎಸ್ ಅಧಿಕಾರಿ ಪಂಕಜ್ ಕುಮಾರ್ ಪಾಂಡೆಗೆ ಶೋಕಾಸ್ ನೋಟಿಸ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಭೆಗೆ ಸತತ ಗೈರಾಗಿದ್ದ ಕಾರಣಕ್ಕೆ ಹಿರಿಯ ಐಎಎಸ್ ಅಧಿಕಾರಿ ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿರುವ ಪಂಕಜ್ ಕುಮಾರ್ ಪಾಂಡೆಯವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ನೋಟಿಸ್ ನೀಡಿದ್ದಾರೆ.

ಜನವರಿ 20ರಂದು ನಡೆದ ಮುಖ್ಯಮಂತ್ರಿ ಅವರ ಸಭೆಗೆ ಹಾಜರಾಗುವಂತೆ ಪಂಕಜ್ ಕುಮಾರ್ ಪಾಂಡೆಯವರಿಗೆ ಮುಖ್ಯಮಂತ್ರಿಯವರ ಕಾರ್ಯಾಲಯದಿಂದ ಸೂಚನೆ ನೀಡಲಾಗಿತ್ತು. ಆದರೆ, ನಿಗದಿತ ಸಮಯಕ್ಕೆ ಅವರು ಹಾಜರಾಗಿರಲಿಲ್ಲ.

ಈ ಹಿಂದೆಯೂ ಹಲವು ಸಭೆಗಳಿಗೆ ಸತತವಾಗಿ ಗೈರು ಹಾಜರಾಗಿದ್ದಾರೆ. ಜನವರಿ 20ರ ಸಭೆಗೆ ನಿಗದಿತ ಸಮಯಕ್ಕೆ ಹಾಜರಾಗದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಸಿಎಂ ಸಿದ್ದರಾಮಯ್ಯ ಪಂಕಜ್ ಕುಮಾರ್ ಪಾಂಡೆ ವಿರುದ್ಧ ಗರಂ ಆಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಹಿನ್ನೆಲೆಯಲ್ಲಿ ಅವರ ಅಶಿಸ್ತನ್ನು ಕರ್ತವ್ಯ ಲೋಪ ಎಂದು ಪರಿಗಣಿಸಲಾಗಿದ್ದು, ಲಿಖಿತ ವಿವರಣೆಯೊಂದಿಗೆ ಉತ್ತರ ನೀಡುವಂತೆ ಅವರಿಗೆ ಸಿಎಸ್ ಶಾಲಿನಿ ರಜನೀಶ್ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular