ಹಳೆ,ಕೊಳಕು ಬಟ್ಟೆ ಹಾಕಿಕೊಂಡು ಬಂದವರಿಗೂ ಮಾನವೀಯತೆ ತೋರಿ, ಆರೋಗ್ಯ ಸೇವೆ ನೀಡಿ -ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಹಳೆ-ಕೊಳಕು ಬಟ್ಟೆ ಹಾಕಿಕೊಂಡು ಬಂದವರನ್ನೂ ಮಾನವೀಯವಾಗಿ ನಡೆಸಿಕೊಂಡು ಆರೋಗ್ಯ ಸೇವೆ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಧಾನಸೌಧದ ಗ್ರಾಂಡ್ ಸ್ಟೆಪ್ಸ್ ಮೇಲೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 262 ಆಧುನಿಕ ಜೀವ ರಕ್ಷಕ ಆ್ಯಂಬುಲೆನ್ಸ್ ಗಳನ್ನು ಜನಸೇವೆಗೆ ಅರ್ಪಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಬೇಕು ಎನ್ನುವುದು ನಮ್ಮ ಸರ್ಕಾರದ ಗುರಿ. ಹಳೆ ಬಟ್ಟೆ-ಕೊಳಕು ಬಟ್ಟೆ ಹಾಕಿಕೊಂಡು ಬರುವ ಬಡವರನ್ನೂ ಮಾನವೀಯವಾಗಿ ನಡೆಸಿಕೊಂಡು ತಾರತಮ್ಯ ಇಲ್ಲದ ಉತ್ತಮ ಆರೋಗ್ಯ ಸೇವೆ ನೀಡಬೇಕು.ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎಂದು ಅವರು ಹೇಳಿದರು.

ಪ್ರತೀ ಜಿಲ್ಲೆಯಲ್ಲಿ MRI ಸ್ಕ್ಯಾನಿಂಗ್ ಸೌಲಭ್ಯ ಇರಬೇಕು. ಖಾಸಗಿ ಡಯಾಗ್ನಸ್ಟಿಕ್ ಸೆಂಟರ್ ಗಳಲ್ಲಿ ಸೇವಾವೆಚ್ಚ ದುಬಾರಿ ಆಗಿರುವುದರಿಂದ ಬಡವರಿಗೆ ಬಹಳ ಕಷ್ಟ ಆಗುತ್ತಿದೆ. ಈ ಕಾರಣಕ್ಕೆ ಸಿಎಂ ಪರಿಹಾರ ನಿಧಿಗೆ ಸಾವಿರಾರು ಮಂದಿ ಬೇಡಿಕೆ ಅರ್ಜಿ ಕೊಡುತ್ತಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಶಾಸಕ ರಿಜ್ವಾನ್ ಅರ್ಷದ್ , ಡಿಸಿಎಂ ಡಿ.ಕೆ.ಶಿವಕುಮಾರ್, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮತ್ತಿತರಿದ್ದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read