BIG NEWS: ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ಥಳಿತ: ಹುಕ್ಕೆರಿ ಬಂದ್ ಎಚ್ಚರಿಕೆ

ಬೆಳಗಾವಿ: ಅಕ್ರಮವಾಗಿ ಗೋವುಗಳನ್ನು ಸಾಗಾಣೆ ಮಾಡುತ್ತಿದ್ದವರನ್ನು ತಡೆದು ಗೋವುಗಳನ್ನು ರಕ್ಷಿಸಿದ್ದ ಶ್ರೀರಾಮಸೇನೆ ಕಾರ್ಯಕರ್ತರನ್ನು ಮರಕ್ಕೆ ಕಟ್ಟಿಹಾಕಿ ಥಳಿಸಿದಘಯ್ಟನೆಯನ್ನು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ತೀವ್ರವಾಗಿ ಖಂಡಿಸಿದ್ದಾರೆ.

ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಜುಲೈ 3ರಂದು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕು ಬಂದ್ ಗೆ ಕರೆ ನೀಡಲು ನಿರ್ಧರಿಸಲಾಗಿದೆ. ಹಿಂದೂ ಕಾರ್ಯಕರ್ತರ ಮೇಲಿನ ಹಲ್ಲೆ ಪ್ರಕರಣ ವಿರುದ್ಧ ಪ್ರತಿಭಟನೆಗೆ ನಿರ್ಧರಿಸಲಾಗಿದೆ.

ಈ ಬಗ್ಗೆ ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಮಾಹಿತಿ ನೀಡಿದ್ದು, ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ’ಚಲೋ ಇಂಗಳಗಿ’ ಎಂಬ ಪ್ರತಿಭಟನಾತ್ಮಕ ರ್ಯಾಲಿಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದೂ ಕಾರ್ಯಕರ್ತರ ರಕ್ಷಣೆಯಲ್ಲಿ ವಿಫಲವಾದ ರಾಜ್ಯ ಸರ್ಕಾರ ಮತ್ತು ಪೊಲೀಸ್ ವ್ಯವಸ್ಥೆಯ ವಿರುದ್ಧ ಪ್ರತಿಭಟನೆ ನಡೆಸಲಾಗುವುದು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಜುಲೈ 3ರಂದು ಹುಕ್ಕೇರಿಯಲ್ಲಿ ಬಂದ್ ನಡೆಸಲಾಗುವುದು ಎಂದರು.

ಹಲ್ಲೆಯ ಘಟನೆ ಹಿಂದೂ ಕಾರ್ಯಕರ್ತರಲ್ಲಿ ತೀವ್ರ ನೋವುಂಟು ಮಾಡಿದೆ. ಈ ಬಗ್ಗೆ ರಾಜ್ಯ ಸರ್ಕಾರ ಗಮನಹರಿಸಬೇಕಿದೆ ಎಂದು ಆಗ್ರಹಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read