ಬೆಂಗಳೂರು: ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿರುವುದನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ರಾಜಣ್ಣ ಅವರನ್ನು ವಜಾ ಮಾಡಲು ಅವರು ಮಾಡಿರುವ ತಪ್ಪಾದರೂ ಏನು? ಎಂದು ಬಿಜೆಪಿ ಮಾಜಿ ಸಚಿವ ಶ್ರೀರಾಮುಲು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ರಾಜಣ್ಣ ಪರವಾಗಿ ನಾವು ಹಾಗೂ ಇಡೀ ಸಮಾಜದ ಮುಖಂಡರು ಇದ್ದೇವೆ. ವಾಲ್ಮೀಕಿ ಸಮುದಾಯದ ಅವರನ್ನು ಸಚಿವ ಸ್ಥಾನದಿಂದ ವಜಾ ಗೊಳಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಖಂಡಿಸುತ್ತೇವೆ ಎಂದರು.
ಇದೇ ವೇಳೆ ರಾಜಣ್ಣ ಹಾಗೂ ಅವರ ಪುತ್ರ ರಾಜೇಂದ್ರ ಇಬ್ಬರೂ ಬಿಜೆಪಿ ಬರಲಿ. ನೀವು ಬಿಜೆಪಿಗೆ ಬನ್ನಿ, ನಾವು ನಮಗಿರುವ ಸ್ಥಾನಕ್ಕಿಂತಲೂ ಹೆಚ್ಚಿನ ಸ್ಥಾನವನ್ನು ನಿಮಗೆ ಕೊಡಿಸುತ್ತೇವೆ. ಈ ನಿಟ್ಟಿನಲ್ಲಿ ಸಮುದಾಯದ ಮುಖಂಡರೆಲ್ಲರೂ ನಿಮ್ಮ ಪರ ನಿಲ್ಲುತ್ತಾರೆ ಎಂದು ಹೇಳಿದರು.