ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿರುವುದಕ್ಕೆ ಬಿಜೆಪಿ ನಾಯಕ, ಮಾಜಿ ಸಚಿವ ಬಿ.ಶ್ರೀರಾಮುಲು ವಾಗ್ದಾಳಿ ನಡೆಸಿದ್ದಾರೆ. ಸಿಎಂ ಡಿ.ಕೆ.ಶಿವಕುಮಾರ್ ನಾಲ್ಕು ದಿನ ದೆಹಲಿಯಲ್ಲಿ ರಾಹುಲ್ ಗಾಂಧಿ ಮನೆ ಗೇಟ್ ಕಾದಿದ್ದಾರೆ. ಆದರೂ ಈವರೆಗೂ ಸಚಿವ ಸಂಪುಟ ವಿಸ್ತರಣೆಗೆ ದಿನಾಂಕ ನಿಗದಿಯಾಗಿಲ್ಲ ಎಂದು ಕಿಡಿಕಾರಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ರಾಅಹುಲ್ ಗಾಂಧಿಯವರಿಗೆ ಸೂಟ್ ಕೇಸ್ ತಲುಪಿಲ್ಲ ಅಂತಾ ಭಾವಿಸುತ್ತೇನೆ. ಬಹಳಷ್ಟು ನಾಯಕರು ಸೂಟ್ ಕೇಸ್ ತೆಗೆದುಕೊಂಡು ವಿಶೇಷ ವಿಮಾನದಲ್ಲಿ ಹೋಗುತ್ತಿದ್ದಾರೆ. ಯಾರು ಹೆಚ್ಚು ಕೊಡುತ್ತಾರೋ ಅವರಿಗೆ ಮಂತ್ರಿ ಸ್ಥಾನ ಫಿಕ್ಸ್ ಆಗಿದೆ ಎಂದು ಆರೋಪಿಸಿದರು.
ಕರ್ನಾಟಕದಲ್ಲಿ ನಾನು ಮಂತ್ರಿಯಾಗಬೇಕು ಎಂದು ಕಾಂಗ್ರೆಸ್ ನಾಯಕರಲ್ಲಿ ಪೈಪೋಟಿ ನಡೆಯುತ್ತಿದೆ. ಹಾಗಾಗಿ ಕರ್ನಾಟಕದಿಂದ ದೆಹಲಿಗೆ ವಿಶೇಷ ವಿಮಾನಗಳಲ್ಲಿ ಸೂಟ್ ಕೇಸ್ ಹಿಡಿದು ಹೋಗುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಬರಗಾಲವಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಬೇಕಾಬಿಟ್ಟಿಯಾಗಿ ಸಿಎಂ ಬರ ಅಧ್ಯಯನ ಮಾಡುತ್ತಿದ್ದಾರೆ. ಡ್ರೋನ್ ಸರ್ವೆ ಮಾಡಲು ಹೊರಟಿದ್ದಾರೆ. ಆದರೆ ಅದರ ರಕ್ಕೆಯೆ ಮುರಿದು ಹೋಗಿದೆ ಎಂದು ಲೇವಡಿ ಮಾಡಿದರು.
ಇನ್ನು ರಾಜ್ಯ ಸರ್ಕಾರದ ಆಡಳಿತ ವೈಖರಿಯಂತೂ ಸಂಪೂರ್ಣ ವಿಫಲವಾಅಗಿದೆ. ವೃದ್ಧಾಪ್ಯ ವೇತನ ಇಲ್ಲದೇ ವೃದ್ಧರು ಪರದಾಡುತ್ತಿದ್ದಾರೆ. ಸರ್ಕಾರ ಈಗಲಾದೂ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಹೇಳಿದರು.

