HomeKarnatakaBIG NEWS: ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

BIG NEWS: ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

ಮಂಡ್ಯ: ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗಲೇ ಪುರಸಭೆಯ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದಿದೆ.

ಶ್ರೀರಂಗಪಟ್ಟಣ ಪುರಸಭೆಯ ಮುಖ್ಯಾಧಿಕಾರಿ ರಾಣಿ ಹಾಗೂ ಕಂದಾಯ ಅಧಿಕಾರಿ ಗಿರೀಶ್ ಲೋಕಾಯುಕ್ತ ಬಲೆಗೆ ಬಿದ್ದವರು. 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೌತಿ ಖಾತೆ ಮಾಡಿಕೊಡಲು ಅಧಿಕಾರಿಗಳಿಬ್ಬರೂ 2 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮಂಡ್ಯ ಮೂಲದ ಪ್ರಶಾಂತ್ ಎಂಬುವವರಿಂದ ಮುಂಗಡವಾಗಿ 1 ಲಕ್ಷ ರೂಪಾಯಿ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಡಿವೈ ಎಸ್ ಪಿ ಸುನೀಲ್ ಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular