HomeLatest NewsBIG NEWS: ದಿತ್ವಾ ಚಂಡಮಾರುತ: ಶ್ರೀಲಂಕಾದಲ್ಲಿ ಸಿಲುಕಿದ್ದ 400 ಭಾರತೀಯರ ರಕ್ಷಣೆ

BIG NEWS: ದಿತ್ವಾ ಚಂಡಮಾರುತ: ಶ್ರೀಲಂಕಾದಲ್ಲಿ ಸಿಲುಕಿದ್ದ 400 ಭಾರತೀಯರ ರಕ್ಷಣೆ

ಕೊಲಂಬೊ: ದಿತ್ವಾ ಚಂಡಮಾರುತದ ಅಬ್ಬರಕ್ಕೆ ಶ್ರೀಲಂಕಾದಲ್ಲಿ ಭಾರಿ ಮಳೆ, ಪ್ರವಾಹವುಂಟಾಗಿದ್ದು, ಶ್ರೀಲಂಕಾದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 400 ಭಾರತೀಯರನ್ನು ರಕ್ಷಣೆ ಮಾಡಲಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ಕೊಲಂಬೊ ವಿಮಾನ ನಿಲ್ದಾಣದಲ್ಲಿ ಸಿಲುಕಿದ್ದ 400 ಭಾರತೀಯರನ್ನು ಸುರಕ್ಷಿತವಾಗಿ ತವರಿಗೆ ರವಾನಿಸಲಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸಿ 130 ವಿಮಾನದಲ್ಲಿ 130 ಭಾರತೀಯರನ್ನು ದೆಹಲಿಗೆ ಹಾಗೂ ಐಎಲ್ 76 ವಿಮಾನದಲ್ಲಿ 250 ಜನರನ್ನು ತಿರುವನಂತಪುರಂಗೆ ಕಳುಹಿಸಲಾಗಿದೆ. ಈ ವಿಮಾನಗಳು ಶ್ರೀಲಂಕಾ ಸಂತ್ರಸ್ತರಿಗೆ ಆಹಾರ ಹಾಗೂ ಇತರ ಸಾಮಗ್ರಿಗಳನ್ನು ಹೊತ್ತು ಕೊಲಂಬೊಗೆ ತೆರಳಿತ್ತು. ಒಟ್ಟು 400 ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular