ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರು ತುಂಗಾ ನದಿಗೆ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಗುಲಗಂಜಿಮನೆ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಈ ಘಟನೆ ನಡೆದಿದೆ. ಚಾಲಕ ನಿಯಂತ್ರಣ ತಪಿ ನದ್ಗೆ ಕಾರು ಬಿದ್ದಿದ್ದು, ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಯಾಳುಗಳನ್ನು ಶೃಂಗೇರಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಶೃಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.