HomeLive NewsBIG NEWS: ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ವೋಟ್ ಚೋರ್ ಕೌನ್ ಹೈ? ರಾಹುಲ್...

BIG NEWS: ಶೃಂಗೇರಿ ಅಂಚೆ ಮತಗಳ ಮರು ಎಣಿಕೆ: ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ! ಎಂದು ಅಣಕಿಸಿದ ಆರ್.ಅಶೋಕ್

ಬೆಂಗಳೂರು: ಶೃಂಗೇರಿಯಲ್ಲಿ ಕಾಂಗ್ರೆಸ್ ಅಸಿಂಧು – ಸತ್ಯಕ್ಕೆ ಜಯ! ವೋಟ್ ಚೋರ್ ಕೌನ್ ಹೈ? ರಾಹುಲ್ ಗಾಂಧಿ ಹೈ! ಎಂದು ಹೇಳುವ ಮೂಲಕ ವಿಪಕ್ಷ ನಾಯಕ ಆರ್.ಅಶೋಕ್ ಕುಟುಕಿದ್ದಾರೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮರು ಎಣಿಕೆ ಫಲಿತಾಂಶ ಕಾಂಗ್ರೆಸ್ ಪಕ್ಷದ ಕರಾಳ ಮುಖವನ್ನ ಮತ್ತೊಮ್ಮೆ ಬಯಲು ಮಾಡಿದೆ. ಜನಾದೇಶಕ್ಕೆ ಮೋಸ ಮಾಡಿ ಅಕ್ರಮವಾಗಿ ಗೆಲುವು ಸಾಧಿಸಲು ಅಧಿಕಾರ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ಪಕ್ಷಕ್ಕೆ ನ್ಯಾಯಾಂಗ ನೀಡಿದ ತಕ್ಕ ಉತ್ತರ. ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2023ರ ಚುನಾವಣೆಯಲ್ಲಿ 279 ಅಂಚೆ ಮತಗಳನ್ನು ಅಕ್ರಮವಾಗಿ ತಿರಸ್ಕರಿಸುವ ಮೂಲಕ ಜನಾದೇಶವನ್ನು ಕಸಿದುಕೊಳ್ಳಲಾಗಿತ್ತು. ಅಂದು ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರ ಮನವಿಯನ್ನು ತಿರಸ್ಕರಿಸಿ ಕಾಂಗ್ರೆಸ್‌ನ ಟಿ.ಡಿ. ರಾಜೇಗೌಡರನ್ನು ವಿಜೇತರೆಂದು ಘೋಷಿಸಲಾಗಿತ್ತು.

ಅಧಿಕಾರ ಬಲಕ್ಕೆ ಮಣಿಯದ ಜೀವರಾಜ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಆರ್. ನಟರಾಜ್ ಅವರ ಪೀಠವು ನೀಡಿದ ಐತಿಹಾಸಿಕ ಆದೇಶದಂತೆ ನಿನ್ನೆ ಮರು ಎಣಿಕೆ ನಡೆಯಿತು. ಕಾಂಗ್ರೆಸ್ ಪಕ್ಷದ ಮೋಸ ಬಯಲಾಯಿತು.

ಕಳೆದ ಮೂರು ವರ್ಷಗಳಿಂದ ಅನರ್ಹವಾಗಿ ಅಧಿಕಾರ ಅನುಭವಿಸಿದ ಕಾಂಗ್ರೆಸ್‌ಗೆ ಈಗ ಮುಖಭಂಗವಾಗಿದೆ. ಇದು ಕೇವಲ ಒಬ್ಬ ವ್ಯಕ್ತಿಯ ಗೆಲುವಲ್ಲ, ಇದು ಪ್ರಜಾಪ್ರಭುತ್ವದ ಗೆಲುವು. ಶೃಂಗೇರಿಯ ಮತದಾರರ ಮತದ ಮೌಲ್ಯಕ್ಕೆ ಸಂದ ಜಯ.

ನ್ಯಾಯದೇವತೆಯ ಮೇಲೆ ವಿಶ್ವಾಸವಿಟ್ಟು ಸಂವಿಧಾನಾತ್ಮಕವಾಗಿ ಹೋರಾಡಿ ನ್ಯಾಯ ಪಡೆದ ಡಿ.ಎನ್. ಜೀವರಾಜ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ಸತ್ಯಮೇವ ಜಯತೇ! ಎಂದು ಆರ್.ಅಶೋಕ್ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular