HomeKarnatakaBIG NEWS: ನಾನೂ ಕೂಡ ಅಧಿಕಾರಿಗಳಿಗೆ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ತೇನೆ ಎಂದ ಕಾಂಗ್ರೆಸ್ ಶಾಸಕ

BIG NEWS: ನಾನೂ ಕೂಡ ಅಧಿಕಾರಿಗಳಿಗೆ ದುಡ್ಡು ಕೊಟ್ಟು ಕೆಲಸ ಮಾಡಿಸಿಕೊಳ್ತೇನೆ ಎಂದ ಕಾಂಗ್ರೆಸ್ ಶಾಸಕ

ಚಿಕ್ಕಮಗಳೂರು: ನಾನು ಕೂಡ ಕೆಲಸ ಮಾಡಿಸಿಕೊಳ್ಳಲು ಅಧಿಕಾರಿಗಳಿಗೆ ದುಡ್ಡು ಕೊಡ್ತೇನೆ. ಯಾರೂ ಕೂಡ ಸುಮ್ಮನೇ ಕೆಲಸ ಮಾಡಲ್ಲ ಎಂದು ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ.

ನಾನು ಕೂಡ ಟಿಪ್ಸ್ ಕೊಟ್ಟು ಕೆಲಸ ಮಾಡಿಸಿಕೊಳ್ಳುತ್ತೇನೆ. ಲಂಚಕ್ಕೂ ಟಿಪ್ಸ್ ಗೂ ವ್ಯತ್ಯಾಸವಿದೆ ಎಂದು ಶೃಂಗೇರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಹೇಳಿರುವ ವಿಡಿಯೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೆಮ್ಮಾರು ಗ್ರಾಮಪಂಚಾಯಿತಿಯಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಶಾಸಕರು, ಮಲೆನಾಡಿನವರು ಸಹೃದಯರು. ಕೆಲಸ ಮಡಿಕೊಟ್ರೆ ಟಿಪ್ಸ್ ಕೊಡುತ್ತಾರೆ. ಯಾರೂ ಕೂಡ ಹಾಗೆ ಹೋಗಲ್ಲ. ನಾನೂ ಕೂಡ ನನ್ನ ಕೆಲಸ ಮಾಡಿದ್ರೆ ಹಣ ಕೊಡುತ್ತೇನೆ ಎಂದು ಹೇಳಿದ್ದಾರೆ.

ಶಾಸಕರ ಈ ಹೇಳಿಕೆಗೆ ಕಿಡಿಕಾರಿರುವ ರಾಜ್ಯ ಬಿಜೆಪಿ, ಎಟಿಎಂ ಸರ್ಕಾರದಲ್ಲಿ ಕೆಲಸವಾಗಲು ಶಾಸಕರೂ ಸಹ ಲಂಚ ಕೊಡಬೇಕು ಎಂದು ವಾಗ್ದಾಳಿ ನಡೆಸಿದೆ.

For Latest News Updates, Join Our Whatsapp Community🚩
RELATED ARTICLES

Most Popular