HomeLive Newsಶೃಂಗೇರಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ: ಬಿಜೆಪಿ ಅಭ್ಯರ್ಥಿ ಜೀವರಾಜ್ ಸೇರಿ ಮೂವರ ವಿರುದ್ಧ...

ಶೃಂಗೇರಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ: ಬಿಜೆಪಿ ಅಭ್ಯರ್ಥಿ ಜೀವರಾಜ್ ಸೇರಿ ಮೂವರ ವಿರುದ್ಧ FIR ದಾಖಲು

ಚಿಕ್ಕಮಗಳೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಅಭ್ಯರ್ಥಿ ಜೀವರಾಜ್ ಸೇರಿದಂತೆ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಸುಧೀರ್ ಕುಮಾರ್ ಮುರೊಳ್ಳಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್, ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಹಾಗೂ ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸುಧೀರ್ ಕುಮಾರ್ ಮುರೋಳ್ಳಿ ಅಂಚೆ ಮತ ಎಣಿಕೆ ಟೇಬಲ್‌ನ ಏಜೆಂಟ್ ಆಗಿದ್ದರು. ಮತಪತ್ರಗಳನ್ನು ಇರಿಸಲಾಗಿದ್ದ ಸ್ಟ್ರಾಂಗ್ ರೂಂ ಸೀಲ್ ಆಗಿರಲಿಲ್ಲ ಮತ್ತು ಟ್ರಂಕ್‌ಗಳ ಲಾಕ್ ಕಟ್ ಆಗಿತ್ತು ಎಂದು ದೂರುದಾರರು ಗಂಭೀರ ಆರೋಪ ಮಾಡಿದ್ದಾರೆ. ಮತ ಪತ್ರಗಳನ್ನು ಟ್ಯಾಂಪರಿಂಗ್ ಮಾಡಲಾಗಿದೆ ಎಂಬ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಪೊಲೀಸರು ವಂಚನೆ, ಕ್ರಿಮಿನಲ್ ಪಿತೂರಿ ಹಾಗೂ ಫೋರ್ಜರಿ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಅಂದಿನ ಚುನಾವಣಾಧಿಕಾರಿ ವೇದಾಮೂರ್ತಿ ಅವರನ್ನು A1 ಆರೋಪಿ, ಬಿಜೆಪಿ ಅಭ್ಯರ್ಥಿ ಡಿ.ಎನ್. ಜೀವರಾಜ್ ಅವರನ್ನು A2 ಮತ್ತು ಅಂದಿನ ಜಿಲ್ಲಾಧಿಕಾರಿ ರಮೇಶ್ ಕುಮಾರ್ ಅವರನ್ನು A3ಯನ್ನಾಗಿ ಪರುಗಣಿಸಲಾಗಿದೆ.

ಹೈಕೋರ್ಟ್ ಹಾಗೂ ಚುನಾವಣಾ ಆಯೋಗದ ನಿರ್ದೇಶನದ ಮೇರೆಗೆ ಶೃಂಗೇರಿಯಲ್ಲಿ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ನಡೆದಿತ್ತು. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಮುನ್ನಡೆ ಪಡೆದು ಅಂತಿಮವಾಗಿ ಜಯಗಳಿಸಿದ್ದಾರೆ. ಈ ಮೂಲಕ ನಾಲ್ಕನೇ ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆದರೆ 2026 ರಲ್ಲಿ ಅಂಚೆ ಮತಗಳ ಮರು ಎಣಿಕೆಯಲ್ಲಿ ಟ್ವಿಸ್ಟ್ ಪಡೆದುಕೊಂಡಿದ್ದು, ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಪಡೆದಿದ್ದ 569 ಅಂಚೆ ಮತಗಳಲ್ಲಿ 318 ಮತಗಳು ಅಸಿಂಧು ಎಂದು ಘೋಷಿಸಲ್ಪಟ್ಟಿದೆ. ಇದರಿಂದ ಫಲಿತಾಂಶದ ಚಿತ್ರಣ ಬದಲಾಗಿದ್ದು, ಬಿಜೆಪಿಯ ಡಿ.ಎನ್. ಜೀವರಾಜ್ 52 ಮತಗಳ ಅಂತರದಿಂದ ಗೆಲುವು ಪಡೆದಿದ್ದಾರೆ. ಜೀವರಾಜ್ ಅವರಿಗೆ ಚುನಾವಣಾ ಅಧಿಕಾರಿ ಅಧಿಕೃತವಾಗಿ ಪ್ರಮಾಣಪತ್ರವನ್ನು ಹಸ್ತಾಂತರಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular