BIG NEWS: ಸೈನಿಕ ಶಾಲೆ ಮೈದಾನದಲ್ಲಿ ಸಿದ್ದೇಶ್ವರ ಶ್ರೀ ಗಳ ಅಂತಿಮ ದರ್ಶನಕ್ಕೆ ಸಿದ್ಧತೆ; ಜ್ಞಾನಯೋಗಾಶ್ರಮದತ್ತ ಹರಿದು ಬಂದ ಭಕ್ತಸಾಗರ

ವಿಜಯಪುರ: ಭೂಮಿಯ ಮೇಲಿನ ನಡೆದಾಡುವ ದೇವರೆಂದೇ ಹೆಸರಾಗಿದ್ದ ಸಿದ್ದೇಶ್ವರ ಸ್ವಾಮೀಜಿ (82) ವಿಧಿವಶರಾಗಿರುವ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಸ್ವಾಮೀಜಿ ಅಂತಿಮ ದರ್ಶನಕ್ಕಾಗಿ ಹರಿದು ಬರುತ್ತಿದ್ದಾರೆ.

ರಾಜ್ಯದ ಮೂಲೆ ಮೂಲೆಗಳಿಂದ ಮಾತ್ರವಲ್ಲ, ಪುಣೆ, ಮಹಾರಾಷ್ಟ್ರ ಸೇರಿದಂತೆ ಹೊರ ರಾಜ್ಯಗಳಿಂದಲೂ ಕುಟುಂಬ ಸಮೇತರಾಗಿ ವಿಜಯಪುರದ ಜ್ಞಾನಯೋಗಾಶ್ರಮದತ್ತ ಭಕ್ತರು ಆಗಮಿಸುತ್ತಿದ್ದಾರೆ.

ಜ್ಞಾನಯೋಗಾಶ್ರಮದತ್ತ ಹರಿದು ಬರುತ್ತಿರುವ ಭಕ್ತಸಾಗರದ ದೃಶ್ಯ ಡ್ರೋಣ್ ಕ್ಯಾಮರಾದಲ್ಲಿ ಸೆರೆಯಾಗಿದೆ. ವಿಜಯಪುರದ ರಸ್ತೆ ರಸ್ತೆಗಳಲ್ಲಿ ಕಣ್ಣು ಹಾಯಿಸಿದಷ್ಟು ದೂರ ಎಲ್ಲೆಲ್ಲೆಲ್ಲೂ ಸಿದ್ದೇಶ್ವರ ಶ್ರೀಗಳ ಭಕ್ತರೇ ಕಂಡು ಬರುತ್ತಿದ್ದಾರೆ. ಅಂತಿಮ ದರ್ಶನಕ್ಕಾಗಿ ಸಾಗರೋಪಾದಿಯಲ್ಲಿ ಜನರು ಆಗಮಿಸುತ್ತಿದ್ದಾರೆ.

ವಿಜಯಪುರದ ಸೈನಿಕ ಶಾಲೆಯ ಮೈದಾನದಲ್ಲಿ ಸಿದ್ದೇಶ್ವರ ಶ್ರೀಗಳ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತಿದ್ದು, ಅಂತಿಮ ದರ್ಶನಕ್ಕಾಗಿ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ನಡೆದಿದೆ. ಸಂಜೆ ಸ್ವಾಮಿಜಿಯವರ ಅಂತ್ಯಕ್ರಿಯೆ ನೆರವೇರಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read