41ನೇ ವಸಂತಕ್ಕೆ ಕಾಲಿಟ್ಟ ಶ್ರೀಯಾ ಸರನ್; ಅಭಿಮಾನಿಗಳಿಂದ ಶುಭ ಹಾರೈಕೆ

Dreamy! Shriya Saran looks ethereal in white, take a look

ಸಾಲು ಸಾಲು ಸಿನಿಮಾಗಳಲ್ಲಿ ಬಿಜಿಯಾಗಿರುವ ಶ್ರೀಯಾ ಸರನ್ ಇಂದು 41ನೇ ವಸಂತಕ್ಕೆ ಕಾಲಿಟ್ಟಿದ್ದು, ತಮ್ಮ ಹುಟ್ಟುಹಬ್ಬವನ್ನು ಸ್ನೇಹಿತರೊಂದಿಗೆ ಆಚರಿಸಿದ್ದಾರೆ.

2001 ರಲ್ಲಿ ತೆರೆಕಂಡ ವಿಕ್ರಂ ಕುಮಾರ್  ನಿರ್ದೇಶನದ ‘ಇಷ್ಟಂ’ ಚಿತ್ರದ ಮೂಲಕ ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಿದ ಶ್ರೀಯಾ ಅದೇ ವರ್ಷದಲ್ಲಿ ‘ಸಂತೋಷಮ್’ ಸಿನಿಮಾದಲ್ಲಿ ಅಭಿನಯಿಸಿದರು. ಟಾಲಿವುಡ್ ನಲ್ಲಿ ಸಾಕಷ್ಟು ಹೆಸರು ಮಾಡಿದ್ದ ಶ್ರೀಯಾ ಸರನ್ ‘ತುಜೆ ಮೇರಿ ಕಸಮ್’ ಚಿತ್ರದ ಮೂಲಕ ಹಿಂದಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು.

ತೆಲುಗು ಚಿತ್ರರಂಗದಲ್ಲಿ ದೊಡ್ಡ ಸಂಭಾವನೆ ಪಡೆಯುತ್ತಿದ್ದ ಈ ನಟಿ ಸ್ಯಾಂಡಲ್ ವುಡ್ ನಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ‘ಅರಸು’ ಸಿನಿಮಾದಲ್ಲಿ ಅತಿಥಿ ಪಾತ್ರ ಒಂದರಲ್ಲಿ ಕಾಣಿಸಿಕೊಂಡರು. ಇತ್ತೀಚಿಗೆ ಕನ್ನಡದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ಕಬ್ಜಾ’ ದಲ್ಲಿ ಮಧುಮತಿ ಎಂಬ ಪಾತ್ರದಲ್ಲಿ ನಟಿಸಿದ್ದರು. ಇಂದು  ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಭಾಷೆಯ ಸಿನಿ ತಾರೆಯರು ಇವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read