HomeKarnatakaನಟಿ ಶ್ರುತಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಜೆಡಿಎಸ್ ಕಾರ್ಯಕರ್ತನ ವಿರುದ್ಧ ದೂರು

ನಟಿ ಶ್ರುತಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಜೆಡಿಎಸ್ ಕಾರ್ಯಕರ್ತನ ವಿರುದ್ಧ ದೂರು

ರಾಮನಗರ: ನಟಿ ಶ್ರುತಿ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಜೆಡಿಎಸ್ ಕಾರ್ಯಕರ್ತನ ವಿರುದ್ಧ ರಾಮನಗರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಪ್ರಕರಣ ದಾಖಲಿಸಿದ್ದಾರೆ.

ಈ ಮೂಲಕ ಜಾಲತಾಣಗಳಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಮಾಡುವವರಿಗೆ ಚುನಾವಣಾ ಅಧಿಕಾರಿಗಳು ಬಿಸಿ ಮುಟ್ಟಿಸಲು ಮುಂದಾಗಿದ್ದಾರೆ. ಜೆಡಿಎಸ್ ಕಾರ್ಯಕರ್ತ ಜಿ.ಕೆ. ಗಂಗಾಧರ್ ಎಂಬುವರು ಬಿಜೆಪಿ ಮುಖಂಡರಾದ ನಟಿ ಶ್ರುತಿ ವಿರುದ್ಧ ಫೇಸ್ಬುಕ್ ಪೇಜ್ ನಲ್ಲಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಮನಗರ ಠಾಣೆ ಪೊಲೀಸರಿಗೆ ಚುನಾವಣಾ ಅಧಿಕಾರಿ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular