ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ದಿನಾಚರಣೆಯಂದು ಕರಾಳದಿನಾಚರಣೆಗೆ ಬಂದ ಎಂಇಎಸ್ ಮುಖಂಡ ಶುಭಂ ಸೆಳಕೆ ಜೊತೆ ಸೆಲ್ಫಿ ಪೊಲೀಸ್ ಇನ್ಸ್ ಪೆಕ್ಟರ್ ಓರ್ವರು ಸೆಲ್ಫಿ ಕ್ಲಿಕ್ಕಿಸಿಕೊಂಡಿರುವುದು ತೀವ್ರ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಎಂಇಎಸ್ ಮುಖಂಡ ಶುಭಂ ಸೆಳಕೆ ಜೊತೆ ಸೆಲ್ಫಿ ತೆಗೆದುಕೊಂಡಿರುವ ಇನ್ಸ್ ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಸೆಲ್ಫಿ ತೆಗೆದುಕೊಂಡಿದ್ದಾರೆ ಎಂದ ಮಾತ್ರಕ್ಕೆ ಕನ್ನಡ ವಿರೋಧಿ ಮನಸ್ಥಿತಿ ಹೊಂದಿದ್ದಾರೆ ಎಂದು ಭಾವಿಸಬಾರದು. ಕನ್ನಡ ನಾಡಿನ ಬದ್ಧತೆ, ತತ್ವಕ್ಕೆ ವಿರುದ್ಧವಾಗಿ ಹೋಗುವ ಯಾವುದೇ ಅಧಿಕಾರಿ, ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಕನ್ನಡ ನೆಲ, ಜಲ, ಭಾಷೆ ರಕ್ಷಣೆಯಲ್ಲಿ ಯಾವುದೇ ರಾಜಿಯಾಗುವುದಿಲ್ಲ ಎಂದು ತಿಳಿಸಿದ್ದಾರೆ.
ರಾಜ್ಯೋತ್ಸವದಂದು ಎಂಇಎಸ್ ಮುಖಂಡ ಶುಭಂ ಸೆಳಕೆ ಜೊತೆ ಮಾಳಮಾರುತಿ ಠಾಣೆ ಸಿಪಿಐ ಕಾಲೇಮಿರ್ಚೆ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
