ಬೆಂಗಳೂರು: ಬೆಂಗಳೂರು ಸಮ್ಮಿಟ್ ನಲ್ಲಿ ಪಾಲ್ಗೊಂಡಿರುವ ಗಗನಯಾತ್ರಿ ಶುಭಾಂಶು ಶುಕ್ಲ, ಬೆಂಗಳೂರಿನ ಟ್ರ್ಯಾಫಿಕ್ ಬಗ್ಗೆ ನಗೆ ಚಟಾಕಿ ಹಾರಿಸಿದ್ದಾರೆ.
ಮಾರತ್ತಹಳ್ಳಿಯಿಂದ ಮಾದಾವರಕ್ಕೆ ಹೋಗುವ ಸಮಯದಲ್ಲಿ ಬಾಹ್ಯಾಕಾಶಕ್ಕೆ ತಲುಪಬಹುದು ಎಂದು ಹೇಳುವ ಮೂಲಕ ಬೆಂಗಳೂರು ಟ್ರಾಫಿಕ್ ಬಗ್ಗೆ ಕಾಮಿಡಿ ಮಾಡಿದ್ದಾರೆ. ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಎದುರಲ್ಲೇ ಶುಭಾಂಶು ನಗೆ ಚಟಾಕಿ ಹಾರಿಸಿದ್ದಾರೆ.
ಬಾಹ್ಯಾಕಾಶದಿಂದ ಬೆಂಗಳೂರಿಗೆ ಬರುವುದು ಸುಲಭ. ಆದರೆ ಮಾರತ್ತಹಳ್ಳಿಯಿಂದ ಮಾದಾವರಕ್ಕೆ ಹೋಗುವುದು ಕಷ್ಟ. ಮಾರತ್ತಹಳ್ಳಿಯಿಂದ ಮಾದಾವರಕ್ಕೆ ತಲುಪುವ ಸಮಯಕ್ಕಿಂತ ವೇಗವಾಗಿ ಬಾಹ್ಯಾಕಾಶಕ್ಕೆ ಹೋಗಬಹುದು ಎಂದು ಹೇಳಿದ್ದಾರೆ.
ಶುಭಾಂಶು ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ ಇನ್ಮುಂದೆ ಇಷ್ಟೊಂದು ಟ್ರಾಫಿಕ್ ಸಮಸ್ಯೆ ಇರಲ್ಲ. ಈ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಗುತ್ತಿದೆ ಎಂದು ಹೇಳಿದರು.
