ಹುಟ್ಟುಹಬ್ಬದ ಸಂಭ್ರಮದಲ್ಲಿ ಶ್ವೇತಾ ಶ್ರೀವಾತ್ಸವ್

Shwetha Srivatsav to play the lead in Devika's Chikkiya Mukutti- Cinema express

ನಟಿ ಶ್ವೇತಾ ಶ್ರೀವಾತ್ಸವ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2006ರಲ್ಲಿ ತೆರೆ ಕಂಡ ‘ಮುಖಾಮುಖಿ’ ಚಿತ್ರದ ಮೂಲಕ ತಮ್ಮ ಸಿನಿ ಪ್ರಯಾಣ ಆರಂಭಿಸಿದ ನಟಿ ಶ್ವೇತಾ 2007 ರಲ್ಲಿ ‘ಆ ದಿನಗಳು’ ಸಿನಿಮಾದಲ್ಲಿ ಅಭಿನಯಿಸಿದರು. ಹೀಗೆ ಸಣ್ಣ ಪುಟ್ಟ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಶ್ವೇತಾ ಶ್ರೀವಾತ್ಸವ್ ‘ಸೈಬರ್ ಯುಗದೊಳ್ ನವ ಯುವ ಮಧುರ ಪ್ರೇಮ ಕಾವ್ಯಂ’ ಸಿನಿಮಾದಲ್ಲಿ ಮೊದಲಬಾರಿ ನಾಯಕಿಯಾದರು.

2013ರಲ್ಲಿ ರಕ್ಷಿತ್ ಶೆಟ್ಟಿ ಜೊತೆ ‘ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ’ ಚಿತ್ರದಲ್ಲಿ ಅಭಿನಯಿಸುವ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದರು.

ಈ ಸಿನಿಮಾ ಸೂಪರ್ ಡೂಪರ್ ಹಿಟ್ ಆಗುವ ಮೂಲಕ ಬಾಕ್ಸ್ ಆಫೀಸ್ ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತು. ನವರಸ ನಾಯಕ ಜಗ್ಗೇಶ್ ನಟನೆಯ ”ರಾಘವೇಂದ್ರ ಸ್ಟೋರ್ಸ್” ಚಿತ್ರದಲ್ಲಿ ಕೊನೆಯದಾಗಿ ಕಾಣಿಸಿಕೊಂಡಿದ್ದ ಶ್ವೇತಾ ಇದೀಗ ‘ಚಿಕ್ಕಿಯ ಮುಕುತಿ’  ಎಂಬ ಸಿನಿಮಾ ಶೂಟಿಂಗಲ್ಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read