HomeKarnatakaಹಲ್ಲಿ ಬಿದ್ದ ಆಹಾರ ಸೇವಿಸಿ ಹಲವರಿಗೆ ವಾಂತಿ, ಭೇದಿ: ಓರ್ವ ಅಸ್ವಸ್ಥ

ಹಲ್ಲಿ ಬಿದ್ದ ಆಹಾರ ಸೇವಿಸಿ ಹಲವರಿಗೆ ವಾಂತಿ, ಭೇದಿ: ಓರ್ವ ಅಸ್ವಸ್ಥ

ಕಲಬರಗಿ: ಹಲ್ಲಿ ಬಿದ್ದ ಆಹಾರ ಸೇವಿಸಿ ಓರ್ವ ಅಸ್ವಸ್ಥರಾಗಿದ್ದು, ಹಲವರಿಗೆ ವಾಂತಿ ಭೇದಿ ಶುರುವಾಗಿದೆ. ಕಲಬುರಗಿ ಜಿಲ್ಲೆ ಸೇಡಂ ಪಟ್ಟಣದ ವಾಸವದತ್ತ ಸಿಮೆಂಟ್ ಫ್ಯಾಕ್ಟರಿಯಲ್ಲಿ ಘಟನೆ ನಡೆದಿದೆ.

ಕಾರ್ಮಿಕರ ಕ್ಯಾಂಟೀನ್ ಆಹಾರದಲ್ಲಿ ಹಲ್ಲಿ ಪತ್ತೆಯಾಗಿದೆ. ಕಾರ್ಮಿಕ ಶಿವಶರಣಯ್ಯ ಮುಧೋಳ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಕಾರ್ಮಿಕರಿಗೆ ವಾಂತಿ ಭೇದಿ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕಾರ್ಮಿಕರಿಗೆ ಗ್ಲುಕೋಸ್ ನೀಡಿ ಆಸ್ಪತ್ರೆ ಸಿಬ್ಬಂದಿ ಮನೆಗೆ ಕಳುಹಿಸಿದ್ದಾರೆ. ಮಧ್ಯಾಹ್ನ 150ಕ್ಕೂ ಅಧಿಕ ಜನ ಕ್ಯಾಂಟೀನ್ ನಲ್ಲಿ ಊಟ ಮಾಡಿದ್ದರು ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular