HomeKarnatakaತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮೀಜಿಗಳ 117ನೇ ಜಯಂತಿ ಇಂದು

ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಶಿವಕುಮಾರ ಸ್ವಾಮೀಜಿಗಳ 117ನೇ ಜಯಂತಿ ಇಂದು

ತುಮಕೂರು: ನಡೆದಾಡುವ ದೇವರೆಂದೇ ಖ್ಯಾತರಾಗಿದ್ದ ಸಿದ್ಧಗಂಗಾ ಮಠದ ತ್ರಿವಿಧ ದಾಸೋಹಿ ಲಿಂಗೈಕ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ 117ನೇ ಜಯಂತಿ ಮತ್ತು ಗುರುವಂದನಾ ಕಾರ್ಯಕ್ರಮ ಏಪ್ರಿಲ್ 1ರಂದು ಸಿದ್ಧಗಂಗಾ ಮಠದಲ್ಲಿ ನಡೆಯಲಿದೆ.

ಮಠದಲ್ಲಿ ಬೆಳಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಪತಂಜಲಿ ಯೋಗ ಪೀಠದ ಬಾಬಾ ರಾಮದೇವ್ ಉದ್ಘಾಟಿಸಲಿದ್ದಾರೆ. ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ. ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ. ಡಾ. ಅನ್ನದಾನೇಶ್ವರ ಸ್ವಾಮೀಜಿ, ಧಾರವಾಡ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಸ್ವಾಮೀಜಿ, ಗದಗದ ಶ್ರೀ ಬೀರೇಶ್ವರ ಪುಣ್ಯಾಶ್ರಮದ ಅಧ್ಯಕ್ಷ ಶ್ರೀ ಕಲ್ಲಯ್ಯ ಅಜ್ಜನವರು, ಸಿದ್ದಗಂಗಾ ಮಠದ ಉತ್ತರಾಧಿಕಾರಿ ಶ್ರೀ ಶಿವಸಿದ್ದೇಶ್ವರ ಸ್ವಾಮೀಜಿ ಭಾಗವಹಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಕ್ತರಿಗೆ 6 ಕಡೆ ದಾಸೋಹ ವ್ಯವಸ್ಥೆ ಮಾಡಲಾಗಿದೆ. ಒಂದೇ ಬಾರಿಗೆ 30,000 ಮಂದಿ ಭಕ್ತರು ಕುಳಿತು ಊಟ ಮಾಡುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಬೆಳಗ್ಗೆಯಿಂದ ರಾತ್ರಿಯವರೆಗೂ ದಾಸೋಹ ನಡೆಯಲಿದೆ. 8 ಗಂಟೆಗೆ ಶ್ರೀಗಳ ಪ್ರತಿಮೆ ಉತ್ಸವ ನಡೆಯಲಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular