ಕಲಬುರಗಿ: ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಆದೋಲದ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಐನೊಳ್ಳಿ ಗ್ರಾಮದಲ್ಲಿ ಏ.15ರಂದು ಶ್ರೀ ರಾಮರಥೋತ್ಸವ ಸಮಿತಿ ಆಯೋಜಿಸಿದ್ದ ಶ್ರೀರಾಮನವಮಿ ಉತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಿದ್ದಲಿಂಗ ಸ್ವಾಮೀಜಿ ಕೋಮುಧ್ವೇಷದ ಭಾಷಣ ಮಾಡಿದ್ದರು ಎಂಬ ಆರೋಪ ಕೇಳಿಬಂದಿದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ, ಶರಣ ಬಸಪ್ಪ ದರ್ಶನಾಪುರ, ಪ್ರಿಯಾಂಕ್ ಖರ್ಗೆ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಚಿಂಚೋಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಂಚೋಳಿ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಶರಣು ಪಾಟಿಲ್ ನೀಡಿದ ದೂರಿನ ಮೇರೆಗೆ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಎಫ್ಐಆರ್ ದಾಖಲಾಗಿದೆ.