HomeLatest NewsBREAKING: ಜ್ಯೋತಿಷಿ ಕಮಲಾಕರ್ ಭಟ್-ಸುಚಿತ್ರಾ ಪ್ರಕರಣ: ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸರ ತಲೆದಂಡ

BREAKING: ಜ್ಯೋತಿಷಿ ಕಮಲಾಕರ್ ಭಟ್-ಸುಚಿತ್ರಾ ಪ್ರಕರಣ: ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸರ ತಲೆದಂಡ

ಕಾರವಾರ: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ವೈಫಲ್ಯ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸರ ತಲೆದಂಡವಾಗಿದೆ.

ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಪ್ರಕರಣದಲ್ಲಿ ಪೊಲೀಸರ ವೈಫಲ್ಯವಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸಿದ್ದಾಪುರ ಠಾಣೆಯ ಎ ಎಸ್ ಐ ಗಣಪತಿ ಭಟ್ ಹಾಗೂ ಹೆಚ್ ಸಿ ಚಂದ್ರಶೇಖರ್ ಇಬ್ಬರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇಬ್ಬರನ್ನೂ ಹಳಿಯಾಳ ಉಪವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ. ಈ ಪ್ರಕರಣವನ್ನು ಗಂಭಿರವಾಗಿ ಪರಿಗಣಿಸಿರುವ ಉತ್ತರ ಕನ್ನಡ ಜಿಲ್ಲಾ ಎಸ್ ಪಿ ದೀಪನ್, ಶಿರಸಿ ಡಿವೈಎಸ್ ಪಿ ಗೀತಾ ಪಾಟೀಲ್ ನೇತೃತ್ವದಲ್ಲಿ ತನಿಖೆಗೆ ಆದೇಶ ನೀಡಿದ್ದಾರೆ.

ಜ್ಯೋತಿಷಿ ಕಮಲಾಕರ್ ಭಟ್ ಹಾಗೂ ಸುಚಿತ್ರಾ ನಾಯಕ್ ನಡುವೆ ಅಕ್ರಮ ಸಂಬಂಧವಿರುವ ಬಗ್ಗೆ ಹಾಗೂ ಮಕ್ಕಳಿಗೆ ಹಿಂಸಿಸುತ್ತಿರುವ ಬಗ್ಗೆ ಸುಚಿತ್ರಾ ಮಗಳು ಹಾಗೂ ಪತಿ ಮಹೇಶ್ ನಾಯಕ್ ಸಿದ್ದಾಪುರ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ವಿಚಾರ ಗೊತ್ತಾಗುತ್ತಿದ್ದಂತೆಯೇ ಕಮಲಾಕರ್ ಭಟ್, ಸುಚಿತ್ರಾ ಹಾಗೂ ಸಹಚರರು ಮಹೇಶ್ ತಂಗಿದ್ದ ಆತನ ಸಹೋದರ ವಸಂತ್ ನಾಯಕ್ ಮನೆಗೆ ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ಮಹೇಶ್ ಹಾಗೂ ವಸಂತ್ ಮೇಲೆ ಹಲ್ಲೆ ನಡೆಸಿದ್ದ ವೇಳೆ ಗಂಭೀರವಾಗಿ ಹಲ್ಲೆಗೊಳಗಾಗಿದ್ದ ವಸಂತ್ ನಾಯಕ್ ಸ್ಥಳದಲ್ಲೇ ಸಾವನ್ನಪ್ಪಿದ್ದರು.

ವಸಂತ್ ನಾಯಕ್ ಹತ್ಯೆ ಪ್ರಕರಣದಲ್ಲಿ ಪೊಲೀಸರ ವೈಫಲ್ಯ ಎದ್ದುಕಾಣುತ್ತಿದೆ ಎಂದು ಸಿದ್ದಾಪುರದ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಬೆಳವಣಿಗೆ ಬೆನ್ನಲ್ಲೆ ಸಿದ್ದಾಪುರ ಠಾಣೆಯ ಇಬ್ಬರು ಪೊಲೀಸರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular