ಮೈಸೂರು: ಒಂದು ತಿಂಗಳ ಒಳಗಾಗ್ ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡಬೇಕು ಇಲ್ಲವಾದಲ್ಲಿ ರಾಜ್ಯಪಾಲರಿಗೆ ದೂರು ನೀಡುವುದಾಗಿ ಹಾಗೂ ಉಗ್ರ ಹೋರಾಟ ನಡೆಸುವುದಾಗಿ ಗುತ್ತಿಗೆದಾರರು ಎಚ್ಚರಿಕೆ ನೀಡಿದ್ದಾರೆ ಇದೇ ವಿಚಾರವಗಿ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ ನಿನ್ನೆ ಗುತ್ತಿಗೆದಾರರು ಕೋರ್ಟ್ ಗೆ ಹೋಗಲಿ ಎಂದಿದ್ದರು. ಇಂದು ಆ ವಿಚಾರ ಸಚಿವರು ನೋಡಿಕೊಳ್ತಾರೆ ಎಂದಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗುತ್ತಿಗೆದಾರರ ಬಾಕಿ ಪಾವತಿಯಾಗದಿದ್ದರೆ ರಾಜ್ಯಪಾಲರನ್ನು ಭೇಟಿಮಾಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ಬಗ್ಗೆ ಸಂಬಂಧಪಟ್ಟ ಸಚಿವರು ಕ್ರಮ ಕೈಗೊಳ್ಳಲಿದ್ದಾರೆ ಎಂದರು.
ಗುತ್ತಿಗೆದಾರರ ಸಮಸ್ಯೆ, ಬಾಕಿ ಹಣ ಪಾವತಿ ಬಗ್ಗೆ ಸಂಬಂಧಪಟ್ಟ ಇಲಾಖೆ ಸಚಿವರುಗಳು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಇದೇ ವೇಳೆ ಮೈಸೂರಿನಲ್ಲಿ ನಡೆದ ಉದ್ಯೋಗ ಮೇಳ ಯಶಸ್ವಿಯಾಗಿದ್ದು, ಈ ಕಾರ್ಯಕ್ರಮವನ್ನು ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.