HomeKarnatakaBIG NEWS: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪೀಕರ್ ಗೆ ದೂರು

BIG NEWS: ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಸ್ಪೀಕರ್ ಗೆ ದೂರು

ಬೆಂಗಳೂರು: ಗೋಕಾಕ್ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ವಿಧಾನಸಭೆ ಸ್ಪೀಕರ್ ಗೆ ದೂರು ನೀಡಲಾಗಿದೆ.

ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ವಕ್ತಾರ ಸಿದ್ದರಾಜು ಸ್ಪೀಕರ್ ಯು.ಟಿ.ಖಾದರ್ ಅವರಿಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೆಲ ದಿನಗಳ ಹಿಂದೆ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಶಾಸಕ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆ ಕರ್ನಾಟಕದಲ್ಲಿಯೂ ಆಗಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವೂ ಮಹಾರಾಷ್ಟ್ರ ಸರ್ಕಾರದ ಮಾದರಿಯಲ್ಲಿಯೇ ಬದಲಾವಣೆಯಾಗಲಿದೆ ಎಂದು ಹೇಳಿದ್ದರು. ರಮೇಶ್ ಜಾರಕಿಹೊಳಿ ಹೇಳಿಕೆ ಖಂಡಿಸಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸುವಂತೆ ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular