ವಿಜಯನಗರ: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ, ಉಗ್ರರಿಗೆ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಜಯನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಜೈಲಿನಲ್ಲಿ ಮೊಬೈಲ್, ಟಿವಿ ಸೇರಿದಂತೆ ಕೈದಿಗಳಿಗೆ ರಾಜಾತಿಥ್ಯಕ್ಕೆ ಅವಕಾಶವಿಲ್ಲ. ಅವಕಾಶ ಮಾಡಿಕೊಟ್ಟವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.
ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇಂತಹ ಘಟನೆ ಮರುಕಳಿಸದಂತೆ ಕ್ರಮ ಕೈಗೊಳ್ಳಲಾಗುವುದು ಎಂದರು.
