HomeLatest NewsBIG NEWS: ಬಿಜೆಪಿಯವರು ರಾಜಕೀಯಕ್ಕಾಗಿ ಆರೋಪ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

BIG NEWS: ಬಿಜೆಪಿಯವರು ರಾಜಕೀಯಕ್ಕಾಗಿ ಆರೋಪ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವ ಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರೊಯಿಸಿ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular