HomeLatest NewsBIG NEWS: ಎಲ್ಲಾ ಗೊಂದಲಗಳಿಗೆ ಹೈಕಮಾಂಡ್ ನವರೇ ಅಂತ್ಯ ಹಾಡಬೇಕು: ಸಿಎಂ ಸಿದ್ದರಾಮಯ್ಯ

BIG NEWS: ಎಲ್ಲಾ ಗೊಂದಲಗಳಿಗೆ ಹೈಕಮಾಂಡ್ ನವರೇ ಅಂತ್ಯ ಹಾಡಬೇಕು: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಚಿವ ಸಂಪುಟ ಪುನಾರಚನೆ ವಿಚಾರವಾಗಿ ಆರಂಭವಾಗಿರುವ ಎಲ್ಲಾ ಗೊಂದಲಗಳಿಗೂ ಹೈಕಮಾಂಡ್ ನಾಯಕರೇ ಮುಕ್ತಾಯ ಹಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಾಸಕರ ಮತ್ತೊಂದು ತಂಡ ದೆಹಲಿಗೆ ಭೇಟಿ ನೀಡಿರುವ ಬಗ್ಗೆ ಮಾತನಾಡುತ್ತಾ, ಶಾಸಕರಿಗೆ ಅವರ ಅಭಿಪ್ರಾಯ ತಿಳಿಸುವ ಸ್ವಾತಂತ್ರ್ಯ ಇದೆ. ಪಕ್ಷರ ವರಿಷ್ಠರು ಏನು ಹೇಳುತ್ತಾರೆ ಎಂದು ನೋಡೋಣ ಎಂದರು.

ಅಂತಿಮವಾಗಿ ಈ ಎಲ್ಲಾ ಗೊಂದಲಗಳಿಗೆ ಮುಕ್ತಾಯ ಹಾಡಲು ಹೈಕಮಾಂಡ್ ತೀರ್ಮಾನಿಸಬೇಕು. ಹೈಕಮಾಂಡ್ ನವರೇ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಬೇಕು ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಚಿವ ಸಂಪುಟ ವಿಸ್ತರಣೆಯನ್ನು ಪಕ್ಷದ ವರಿಷ್ಠರು ಸೂಚನೆ ನೀಡಿದಾಗ ಕೈಗೊಳ್ಳಲಾಗುವುದು. ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಇರಾದೆ ಸದ್ಯಕ್ಕಿಲ್ಲ ಎಂದೂ ಇದೇ ವೇಳೆ ತಿಳಿಸಿದರು.

For Latest News Updates, Join Our Whatsapp Community🚩
RELATED ARTICLES

Most Popular