HomeLatest NewsBREAKING: ನಟ ಉಮೇಶ್ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

BREAKING: ನಟ ಉಮೇಶ್ ಅವರ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಚಿತ್ರರಂಗದ ಹಾಸ್ಯ ನಟ ಉಮೇಶ್ ಲಿವರ್ ಕ್ಯಾನ್ಸರ್ ಗೆ ಬಲಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ಸೂಚಿಸಿದ್ದಾರೆ.

ಹಿರಿಯ ನಟ, ಹಾಸ್ಯ ಕಲಾವಿದ ಉಮೇಶ್(80) ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ ಅವರು ಇಂದು ಬೆಳಿಗ್ಗೆ ವಿಧಿವಶರಾಗಿದ್ದಾರೆ. ಉಮೇಶ್ ಅವರ ಪಾರ್ಥಿವಶರೀರವನ್ನು ಅಂತಿಮ ದರ್ಶನಕ್ಕಾಗಿ ರವೀಂದ್ರ ಕಲಾ ಕ್ಷೇತ್ರದಲ್ಲಿ ಇಡಲಾಗಿದೆ.

ರವೀಂದ್ರ ಕಲಾ ಕ್ಷೇತ್ರಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಉಮೇಶ್ ಅವರ ಅಂತಿಮ ದರ್ಶನ ಪಡೆದರು. ಉಮೇಶ್ ಪತ್ನಿ ಹಾಗೂ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular