HomeKarnatakaBREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

BREAKING NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ ಮತ್ತೊಂದು ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಬಿಜೆಪಿ ಎಂಎಲ್ ಸಿ ಅರುಣ್ ಸಿಎಂ ಸಿದ್ದರಾಮಯ್ಯ ವಿರುದ್ಧ ಗಂಭೀರ ಆರೋಪ ಮಾಡಿ ರಾಜ್ಯಪಾಲರಿಗೆ ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಣ ದುರುಪಯೋಗ ಮಾಡಿಕೊಂಡಿದ್ದಾರೆ. ಬರೋಬ್ಬರಿ 1,494 ಕೋಟಿ ರೂಪಾಯಿ ಹಣದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ. ಜಿಲ್ಲಾ ಮತ್ತು ತಾಲುಕು ಪಂಚಾಯ್ತಿಯಲ್ಲಿ ಬಾಕಿ ಉಳಿದಿದ್ದು, ಬಾಕಿ ಉಳಿದ ಹಣದ ಬಗ್ಗೆ ಸರ್ಕಾರಕ್ಕೆ ಪತ್ರ ಬರೆದರೂ ಯಾವುದೇ ಮಾಹಿತಿ ನೀಡಿಲ್ಲ. 1,494 ಕೋಟಿ ರೂಪಾಯಿ ಹಣ ಸರ್ಕಾರದ ಖಜಾನೆಯಲ್ಲಿಯೂ ಇಲ್ಲ. ಹಾಗಾದರೆ ಈ ಹಣ ಎಲ್ಲಿದೆ? ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡುತ್ತಿಲ್ಲ ಎಂದು ದೂರಿದ್ದಾರೆ.

ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಕೋರಿ ಎಂಎಲ್ ಸಿ ಅರುಣ್ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿ ಮನವಿ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular