BIG NEWS: ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ: ಅರ್ಕಾವತಿ ನಿವೇಶನದಾರರಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆ ನಡೆಯುತ್ತಿರುವಾಗಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಅರ್ಕಾವತಿ ನಿವೇಶನದಾರರು ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಗೆ  ದೂರು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯ, ಬಿಡಿಎ ಆಯುಕ್ತ ಹಾಗೂ ಬಿಡಿಎ ಅಧಿಕಾರಿಗಳ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ನೀಡಿದ್ದಾರೆ.

ಅರ್ಕಾವತಿ ಲೇಔಟ್ ನಲ್ಲಿ ನಿವೇಶನಗಳು ಭೂಗಳ್ಳರ ಪಾಗುತ್ತಿದೆ. ಅಧಿಕಾರ ದುರ್ಬಳಕೆಯಿಂದಾಗಿ ಇಲ್ಲಿನ ನಿವೇಶನದಾರರಿಗೆ ತೊಂದರೆಯಾಗುತ್ತಿದೆ ಎಂದು ಅರ್ಕಾವತಿ ಲೇಔಟ್ ನಲ್ಲಿ ನಿವೇಶನ ಪಡೆದಿದ್ದ ಶಿವಲಿಂಗಪ್ಪ, ವೆಂಕಟಕೃಷ್ಣಪ್ಪ, ರಾಮಚಂದ್ರಯ್ಯ, ರಾಜಶೇಖರ್ ಎಂಬುವವರು ರಾಜ್ಯಪಾಲರಿಗೆದೂರು ನೀಡಿದ್ದಾರೆ.

ಥಣಿಸಂದ್ರ, ಸಂಪಿಗೆಹಳ್ಳಿ, ಜಕ್ಕೂರು, ಕೆ.ನಾರಾಯಣಪುರ ಸೇರಿದಂತೆ 16 ಹಳ್ಳಿಗಳ ಸುಮಾರು 800 ಎಕರೆ ಜಮೀನನ್ನು ರೈತರಿಂದ ಖರೀದಿಸಿ ಬಿಡಿಎ ನಿವೇಶನವಾಗಿ ಪರಿವರ್ತಿಸಲಾಗಿದೆ. ಈ ನಿವೇಶನಗಳಿಗೆ ಬಿಡಿಎ ಅರ್ಕಾವತಿ ಲೇಔಟ್ ಎಂದು ನಾಮಕರಣ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read