HomeLive NewsBREAKING: ಬಿ.ಕೆ.ಹರಿಪ್ರಸಾದ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಕಾಂಗ್ರೆಸ್ ನಾಯಕರ ಬ್ರೇಕ್...

BREAKING: ಬಿ.ಕೆ.ಹರಿಪ್ರಸಾದ್ ಮನೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ: ಕುತೂಹಲ ಮೂಡಿಸಿದ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್!

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಭೇಟಿ ನೀಡಿ ಹರಿಪ್ರಸಾದ್ ಜೊತೆ ಮಹತ್ವದ ಸಮಾಲೋಚನೆ ನಡೆಸಿದ್ದಾರೆ.

ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ, ಬೆಂಗಳೂರಿನ ಸದಾಶಿವನಗರದಲ್ಲಿರುವ ಬಿ.ಕೆ.ಹರಿಪ್ರಸಾದ್ ಅವರ ನಿವಾಸಕ್ಕೆ ತೆರಳಿ ಹರಿಪ್ರಸಾದ್ ಅವರನ್ನು ಭೇಟಿಯಾದರು. ಇದೇ ವೇಳೆ ಈ ವೇಳೆ ವಸತಿ ಸಚಿವ ಜಮೀರ್ ಅಹಮದ್ ಖಾನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಕೂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗಿದ್ದರು.

ಬಿ.ಕೆ.ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಬ್ರೇಕ್ ಫಾಸ್ಟ್ ಸವಿದು, ಕೆಲ ಕಾಲ ಚರ್ಚೆ ನಡೆಸಿದ್ದಾರೆ. ಹರಿಪ್ರಸಾದ್ ನಿವಾಸದಲ್ಲಿ ಸಿಎಂ ಹಾಗೂ ಕಾಂಗ್ರೆಸ್ ನಾಯಕರ ಬ್ರೇಕ್ ಫಾಸ್ಟ್ ಮೀಟಿಂಗ್ ತೀವ್ರ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular