HomeKarnataka2018ರ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಸ್ಮರಿಸಿ ಬಾದಾಮಿ ಸ್ಪರ್ಧೆಯ ರಹಸ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

2018ರ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಸ್ಮರಿಸಿ ಬಾದಾಮಿ ಸ್ಪರ್ಧೆಯ ರಹಸ್ಯ ಬಿಚ್ಚಿಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು: 2018ರ ವಿಧಾನಸಭೆ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಸತ್ಯ ಬಿಚ್ಚಿಟ್ಟಿದ್ದಾರೆ.

2018 ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಾನು ಸೋಲುತ್ತೇನೆ ಎನ್ನುವ ವಾಸನೆ ಇತ್ತು. ಆ ಕಾರಣಕ್ಕೆ ನಾನು ಚಾಮುಂಡೇಶ್ವರಿ ಮತ್ತು ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದೆ ಎಂದು ಕನಕ ಭವನ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಾಮುಂಡೇಶ್ವರಿ ಕ್ಷೇತ್ರ ವ್ಯಾಪ್ತಿಯ ಸಿದ್ದಲಿಂಗಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಷ್ಟು ದೂರದ ಬಾದಾಮಿ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಜನ ಗೆಲ್ಲಿಸಿದ್ದರು. ಆದರೆ, ಇಲ್ಲಿನವರೇ ನನ್ನನ್ನು ಸೋಲಿಸಿದರು ಎಂದು ಹೇಳಿದ್ದಾರೆ.

ಈ ಕ್ಷೇತ್ರದಲ್ಲಿ ನಾನು ಮಾಡಿದಷ್ಟು ಕೆಲಸ ಯಾರೂ ಮಾಡೇ ಇಲ್ಲ. ಆದರೆ, ಕೆಲಸಕ್ಕೆ ಬಾರದ ಯಾರನ್ನೋ ಈ ಕ್ಷೇತ್ರದಲ್ಲಿ ಗೆಲ್ಲಿಸುತ್ತಾರೆ. ಕೆಲಸ ಮಾಡುವವರನ್ನು ಸೋಲಿಸಿ ಬಿಡುತ್ತಾರೆ. ನನ್ನನ್ನು ಸೋಲಿಸಿದವರಿಗೂ ಧನ್ಯವಾದಗಳು. ಗೆಲ್ಲಿಸಿದವರೆಗೂ ಧನ್ಯವಾದಗಳು. ರಾಜಕೀಯದಲ್ಲಿ ಸೋಲು, ಗೆಲುವು ಮುಖ್ಯ ಎಂದು ಚಾಮುಂಡೇಶ್ವರಿ ಸೋಲಿನ ಬಗ್ಗೆ ಸಿದ್ದರಾಮಯ್ಯ ಮೆಲುಕು ಹಾಕಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular