ಪ್ರವಾಹ ಪೀಡಿತ ಪ್ರದೇಶಗಳಿಗೆ ಸಿಎಂ ಭೇಟಿ: ಪರಿಹಾರದ ಜೊತೆಗೆ ಮನೆ ನಿರ್ಮಾಣದ ಭರವಸೆ ನೀಡಿದ ಸಿದ್ದರಾಮಯ್ಯ 

ಬೆಳಗಾವಿ: ಭಾರಿ ಮಳೆಯಿಂದ ಪ್ರವಾಹ ಸ್ಥಿತಿಗೆ ತಲುಪಿ ಸಂಕಷ್ಟಕ್ಕೀಡಾಗಿರುವ ಬೆಳಗಾವಿ ಜಿಲ್ಲೆಯ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ್ದು, ಮಳೆಯಿಂದ ಹಾನಿಯಾದ ಸಂತ್ರಸ್ತರಿಗೆ ಪರಿಹಾರ ಹಾಗೂ ಮನೆ ನೀಡುವ ಭರವಸೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮಳೆಯಿಂದ ಸಂಪೂರ್ಣ ಮನೆ ಹಾನಿ ಸಂಭವಿಸಿದ ಸಂತ್ರಸ್ತರಿಗೆ 1.2 ಲಕ್ಷ ರೂ. ಪರಿಹಾರದ ಜೊತೆಗೆ ಮನೆ ನೀಡಲಾಗುವುದು ಎಂದು ತಿಳಿಸಿದರು.

ಬಿಜೆಪಿ ಸರ್ಕಾರದ ಅವಧಿಯಲ್ಲಿ ನೀಡಿದ್ದ ಪರಿಹಾರ ವಿತರಣೆಯಲ್ಲಿ ಕಾಂಗ್ರೆಸ್ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಸಂಪೂರ್ಣ ಮನೆ ಹಾನಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದರು. ಈ ನೆರವಿನ ದುರುಪಯೋಗವಾಯಿತು. ಹಾಗೂ ಹಲವರಿಗೆ ಮೊದಲನೇ ಕಂತು ಮಾತ್ರ ಬಿಡುಗಡೆಯಾಗಿ, ಎರಡು ಹಾಗೂ ಮೂರನೇ ಕಂತಿನ ಪರಿಹಾರ ಈ ವರೆಗೂ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ 1.2 ಲಕ್ಷ ರೂ. ಪರಿಹಾರ ಹಾಗೂ ಮನೆ ನೀಡುವ ನಿರ್ಧಾರ ಮಾಡಿದೆ ಎಂದು ಸ್ಪಷ್ಟ ಪಡಿಸಿದರು.

ಜನರ ಸಹಕಾರವಿದ್ದರೆ ಪದೇ ಪದೇ ಮುಳುಗಡೆಯಾಗುವ ಹಳ್ಳಿಗಳ ಸ್ಥಳಾಂತರ ಮಾಡುವ ಮೂಲಕ ಶಾಶ್ವತ ಪರಿಹಾರ ಒದಗಿಸಲು ಚಿಂತನೆ ನಡೆಸಲಾಗುವುದು ಎಂದು ತಿಳಿಸಿದರು.

ರಾಜ್ಯದ ಹಲವೆಡೆ ಮಳೆಯಿಂದ ಹಾನಿಯಾಗಿದೆ. ಎಲ್ಲ ಕಡೆ ಪರಿಹಾರ ಕೆಲಸಗಳನ್ನು ಪ್ರಾರಂಭಿಸಲಾಗಿದೆ. ಮೈಸೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಭೇಟಿನೀಡಲಾಗಿದ್ದು, ಮೃತಪಟ್ಟವರಿಗೆ ಹಾಗೂ ಜಾನುವಾರುಗಳು ಸತ್ತಿರುವುದಕ್ಕೆ ಕೂಡಲೇ ಪರಿಹಾರ ವಿತರಿಸಲಾಗುತ್ತಿದೆ. ಮನೆಗಳು ಬಿದ್ದಿರುವುದಕ್ಕೆ ಪರಿಹಾರ, ವಿದ್ಯುತ್‌ ಕಂಬ, ಟ್ರಾನ್ಸ್‌ಫಾರ್ಮರ್‌ ಗಳ ದುರಸ್ತಿ ಮೊದಲಾದ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read