ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ನಗರ ಪ್ರದಕ್ಷಿಣೆ ಆರಂಭಿಸಲಿದ್ದಾರೆ. ರಸ್ತೆಗುಂಡಿಗಳಿಂದ ಆಗಿರುವ ವಾಂತರಗಳ ಬಗ್ಗೆ ಖುದ್ದು ಸಿಎಂ ಪರಿಶೀಲನೆ ನಡೆಸಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಅಧಿಕೃತ ನಿವಾಸ ಕಾವೇರಿಯಿಂದ ನಗರ ಪ್ರದಕ್ಷಿಣೆ ಆರಂಭವಾಗಲಿದೆ. ಸಿಎಂ ಸಿದ್ದರಾಮಯ್ಯ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರು, ಅಧಿಕಾರಿಗಳು ಸಾಥ್ ನೀಡಲಿದ್ದಾರೆ. ಬೆಂಗಳೂರಿನ ವಿವಿಧ ಪ್ರದೇಶಗಳುಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಬೆಂಗಳೂರಿನಲ್ಲಿ ರಸ್ತೆಗುಂಡಿಗಳ ವಿಚಾರ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿತ್ತು. ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭವಾಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಬೆಂಗಳೂರಿನ ರಸ್ತೆಗುಂಡಿಗಳನ್ನು ಒಂದು ತಿಂಗಳ ಒಳಗಾಗಿ ಮುಚ್ಚುವಂತೆ ಅಧಿಕಾರಿಗಳಿಗೆ ಖಡಕ್ ಆದೇಶ ನೀಡಿದೆ. ಹಲವೆಡೆ ರಸ್ತೆಗುಂಡಿಗಳನ್ನು ಮುಚ್ಚಲಾಗುತ್ತಿದೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಇಂದು ಸಿಟಿ ರೌಂಡ್ಸ್ ಮೂಲಕ ರಸ್ತೆಗುಂಡಿಗಳನ್ನು ಮುಚ್ಚುತ್ತಿರುವ ಅಧಿಕಾರಿಗಳ ಕಾರ್ಯವೈಖರಿಗಳನ್ನು ಖುದ್ದು ಪರಿಶೀಲಿಸಲಿದ್ದಾರೆ.