ಬೆಂಗಳೂರು: ಬಿಹಾರ ಪ್ರವಾಸಕ್ಕೆ ತೆರಳಬೇಕಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ಗಂಟೆಗಳ ಕಾಲ ಪ್ರವಾಸ ಮುಂದೂಡಿದ್ದಾರೆ ಎಂದು ತಿಳಿದುಬಂದಿದೆ.
ಇಂದು ಸಂಜೆ 5 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶೇಷ ವಿಮಾನದಲ್ಲಿ ಬಿಹಾರಕ್ಕೆ ತೆರಳಬೇಕಿತ್ತು. ಆದರೆ ಸಂಜೆ 5 ಗಂಟೆ ಬದಲಾಗಿ ಸಂಜೆ 7:30ರ ಸುಮಾರಿಗೆ ಬಿಹಾರ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಗೆ ಸಂಬಂಧಿಸಿದಂತೆ ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದ್ದು, ಹೈಕೋರ್ಟ್ ತೀರ್ಪು ನೋಡಿಕೊಂಡು ಬಿಹಾರ ಪ್ರವಾಸ ಕೈಗೊಳ್ಳಲಿದ್ದಾರೆ ಎಣ್ದು ತಿಳಿದುಬಂದಿದೆ. ಸಿಡಬ್ಲ್ಯೂಸಿ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಹಾರ ಪ್ರವಾಸ ಕೈಗೊಂಡಿದ್ದಾರೆ.