Siddaramaiah Biopic : ತೆರೆಮೇಲೆ ‘ಸಿದ್ದರಾಮಯ್ಯ’ ಬಯೋಪಿಕ್ : ಸಿಎಂ ಪಾತ್ರದಲ್ಲಿ ನಿರೂಪ್ ಭಂಡಾರಿ..!

ಬೆಂಗಳೂರು : ರಾಜಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಿಎಂ ಸಿದ್ದರಾಮಯ್ಯ ಬಯೋಪಿಕ್ ತೆರೆಗೆ ತರಲು ಸಿದ್ದತೆ ನಡೆಸಲಾಗುತ್ತಿದ್ದು, ಸಿದ್ದರಾಮಯ್ಯ ಅಭಿಮಾನಿಗಳಲ್ಲಿ ಬಹಳ ಕುತೂಹಲ ಮೂಡಿದೆ.

ಇದೀಗ ಹೊಸ ವಿಷಯ ಅಂದರೆ ಸಿಎಂ ಪಾತ್ರದಲ್ಲಿ ರಂಗಿತರಂಗ ಖ್ಯಾತಿಯ ನಟ ನಿರೂಪ್ ಬಂಡಾರಿ ನಟಿಸಲಿದ್ದಾರೆ ಎಂಬುದು. ಹೌದು, ಕಳೆದ ಏಳು ತಿಂಗಳಿನಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೀವನಾಧಾರಿತ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ‘ಎ ಕಿಂಗ್ ರೈಸಿಂಗ್ ಬೈ ದಿ ಪೀಪಲ್’ ಎಂಬ ಟ್ಯಾಗ್ ಲೈನ್ ಹೊಂದಿರುವ ‘ಲೀಡರ್ ರಾಮಯ್ಯ’ ಎಂಬ ಶೀರ್ಷಿಕೆಯ ಈ ಚಿತ್ರವು ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಸಿಎಂ ಪಾತ್ರದಲ್ಲಿ ರಂಗಿತರಂಗ ಖ್ಯಾತಿಯ ನಟ ನಿರೂಪ್ ಬಂಡಾರಿ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈಗಾಗಲೇ ನಿರೂಪ್ ಅವರನ್ನು ಚಿತ್ರತಂಡ ಭೇಟಿ ಮಾಡಿದೆಯಂತೆ. ಮೊದಲ ಭಾಗದಲ್ಲಿ ನಿರೂಪ್ ಭಂಡಾರಿ ನಾಯಕನಾಗಿ ನಟಿಸಿದರೆ, ಎರಡನೇ ಭಾಗದಲ್ಲಿ ಸಿದ್ದರಾಮಯ್ಯನವರ ಪಾತ್ರದಲ್ಲಿ ತಮಿಳಿನ ಜನಪ್ರಿಯ ನಟ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರಂತೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ.

ಪಾರ್ಟ್ 1ರಲ್ಲಿ ಸಿದ್ದರಾಮಯ್ಯ ಅವರ ಬಾಲ್ಯದ ದಿನಗಳು ಕಾಲೇಜು, ಲಾಯರ್ ಆಗಿದ್ದ ದಿನಗಳು ಇರಲಿದೆ. ಪಾರ್ಟ್ 2 ರಲ್ಲಿ ಅವರ ರಾಜಕೀಯ ದಿನಗಳು ಮತ್ತು ಹೋರಾಟದ ಹಿನ್ನೆಲೆಯನ್ನು ಹೇಳಲಾಗುತ್ತದೆ. ಸತ್ಯರತ್ನಂ ನಿರ್ದೇಶನದ ಈ ಚಿತ್ರ ಎರಡು ಭಾಗಗಳಲ್ಲಿ ಬಿಡುಗಡೆಯಾಗಲಿದೆ. ಚಿತ್ರದಲ್ಲಿ ಇಬ್ಬರು ನಾಯಕಿಯರು ಇರಲಿದ್ದು, ಶೀಘ್ರದಲ್ಲೇ ನಟ ನಟಿಯರು ಯಾರು ಎಂಬುದು ಫೈನಲ್ ಆಗಲಿದೆ. ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ಕೂಡ ಸಿನಿಮಾಗೆ  ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read