HomeKarnatakaಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿಕೆಶಿ ವಿರುದ್ಧ ಅಶೋಕ್ ಸ್ಪರ್ಧೆ...?

ಸಿದ್ದರಾಮಯ್ಯ ವಿರುದ್ಧ ಸೋಮಣ್ಣ, ಡಿಕೆಶಿ ವಿರುದ್ಧ ಅಶೋಕ್ ಸ್ಪರ್ಧೆ…?

ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ವಿರುದ್ಧ ಪ್ರಬಲ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಬಿಜೆಪಿ ವರಿಷ್ಠರು ಗಂಭೀರ ಚಿಂತನೆ ನಡೆಸಿದ್ದಾರೆ.

ಸ್ವಕ್ಷೇತ್ರಗಳಲ್ಲಿಯೇ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರನ್ನು ಕಟ್ಟಿ ಹಾಕಲು ಮುಂದಾಗಿರುವ ಬಿಜೆಪಿ ಸಿದ್ದರಾಮಯ್ಯ ಸ್ಪರ್ಧಿಸುವ ವರುಣಾ ಕ್ಷೇತ್ರದಿಂದ ಸಚಿವ ಸೋಮಣ್ಣ ಮತ್ತು ಡಿ.ಕೆ. ಶಿವಕುಮಾರ್ ಸ್ಪರ್ಧಿಸುವ ಕನಕಪುರ ಕ್ಷೇತ್ರದಿಂದ ಸಚಿವ ಆರ್ ಅಶೋಕ್ ಆವರನ್ನು ಕಣಕ್ಕಿಳಿಸುವ ಕುರಿತು ಗಂಭೀರ ಚಿಂತನೆ ನಡೆಸಿದೆ. ಸಚಿವರಾದ ಸೋಮಣ್ಣ ಮತ್ತು ಆರ್. ಅಶೋಕ್ ಎರಡು ಕಡೆ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆರ್. ಅಶೋಕ್ ಪ್ರತಿನಿಧಿಸುತ್ತಿರುವ ಪದ್ಮನಾಭನಗರದ ಜೊತೆಗೆ ಕನಕಪುರದಿಂದಲೂ ಕಣಕ್ಕಿಳಿಯುವ ಸಾಧ್ಯತೆ ಇದೆ. ಸೋಮಣ್ಣ ಅವರಿಗೆ ಪ್ರತಿನಿಧಿಸುತ್ತಿರುವ ಗೋವಿಂದರಾಜನಗರ ಕ್ಷೇತ್ರದ ಜೊತೆಗೆ ವರುಣಾದಿಂದ ಸ್ಪರ್ಧಿಸಲಿದ್ದಾರೆ. ಇಲ್ಲವಾದಲ್ಲಿ ವರುಣಾ ಜೊತೆಗೆ ಅವರು ಬಯಸಿದ ಕ್ಷೇತ್ರದಿಂದ ಟಿಕೆಟ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular