HomeLatest NewsBIG NEWS: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

BIG NEWS: ಶಾಂತಿ ಕದಡುವುದೇ ಬಿಜೆಪಿ ಉದ್ದೇಶ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಮದ್ದೂರಿನಲ್ಲಿ ಕಲ್ಲು ತೂರಾಟ ಘಟನೆ ಬೆನ್ನಲ್ಲೇ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದ್ದು, ಇಂದು ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಶಾಂತಿ ಸಭೆ ಕರೆಯಲಾಗಿದೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಾಂತಿ ಕದಡುವುದೇ ಬಿಜೆಪಿಯವರ ಉದ್ದೇಶ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಜೆಪಿಯವರು ಶಾಂತಿ ಕದಡುವ ಕೆಲಸ ಮಾಡುತ್ತಿದ್ದಾರೆ. ಚಾಮುಂಡಿ ಚಲೋ ಮಾಡಿ ನೆಮ್ಮದಿ ಹಾಳು ಮಾಡಿದರು. ಈಗ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿಯೂ ಅದನ್ನೇ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮದ್ದೂರು ಗಲಾಟೆ ಸಂಬಂಧ ಈಗಾಗಲೇ 21 ಜನರನ್ನು ಬಂಧಿಸಲಾಗಿದೆ. ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಜಾತಿ-ಧರ್ಮ ನೋಡಲ್ಲ ಎಂದು ಹೇಳಿದರು. ತಪ್ಪು ಮಾಡಿದವರು ಯಾರೇ ಆಗಿರಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಹಿಂದೂ, ಮುಸ್ಲಿಂ, ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಯಾರೇ ಆಗಿದ್ದರೂ ಕ್ರಮ ಜರುಗಿಸಲಾಗುವುದು ಎಂದು ಹೇಳಿದರು.

For Latest News Updates, Join Our Whatsapp Community🚩
RELATED ARTICLES

Most Popular