HomeKarnatakaಸಿದ್ದರಾಮಯ್ಯ ಮಾದರಿ ನಡೆ: ಜೀರೋ ಟ್ರಾಫಿಕ್, ಹಾರ, ತುರಾಯಿ ಬೇಡವೆಂದು ಸರಳತೆ ಮೆರೆದ ಸಿಎಂ

ಸಿದ್ದರಾಮಯ್ಯ ಮಾದರಿ ನಡೆ: ಜೀರೋ ಟ್ರಾಫಿಕ್, ಹಾರ, ತುರಾಯಿ ಬೇಡವೆಂದು ಸರಳತೆ ಮೆರೆದ ಸಿಎಂ

ಬೆಂಗಳೂರು: ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಸೌಲಭ್ಯ ನಿರಾಕರಿಸಿದ್ದಾರೆ. ಗೌರವ, ಸನ್ಮಾನ ರೂಪದಲ್ಲಿ ಹಾರ, ತುರಾಯಿ, ಶಾಲು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಈ ಮೂಲಕ ಸಿಎಂ ಸರಳತೆ ಮೆರೆದಿದ್ದು, ಅವರ ನಿರ್ಧಾರಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಗಣ್ಯ ವ್ಯಕ್ತಿಗಳಿಗೆ ಮಹಾನಗರಗಳಲ್ಲಿ ಜೀರೋ ಟ್ರಾಫಿಕ್ ಸೌಲಭ್ಯ ಕಲ್ಪಿಸಲಾಗುತ್ತದೆ. ಸಿಎಂ ಪ್ರಯಾಣಿಸುವ ರಸ್ತೆಯಲ್ಲಿ 15 ರಿಂದ 20 ನಿಮಿಷ ಮೊದಲು ವಾಹನ ಸಂಚಾರ ತಗ್ಗಿಸಲಾಗುತ್ತದೆ. ಐದು ನಿಮಿಷ ಮೊದಲೇ ಸಂಬಂಧಿಸಿದ ರಸ್ತೆಗೆ ಸಾರ್ವಜನಿಕ ವಾಹನಗಳ ಸಂಚಾರ ನಿಷೇಧಿಸಿ ಮುಖ್ಯಮಂತ್ರಿಗಳ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಲಿದ್ದು, ಇದನ್ನು ಮನಗಂಡು ಸಿದ್ದರಾಮಯ್ಯ ಜೀರೋ ಟ್ರಾಫಿಕ್ ಬೇಡವೆಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಹಾರ ತುರಾಯಿ ಬದಲಿಗೆ ಕೊಡುವುದಾದರೆ ಪುಸ್ತಕಗಳನ್ನು ನೀಡುವಂತೆ ಸಿದ್ದರಾಮಯ್ಯ ಮನವಿ ಮಾಡಿದ್ದು, ಅವರ ನಿರ್ಧಾರಕ್ಕೆ ಸಾರ್ವಜನಿಕರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular