HomeKarnatakaBIG NEWS : ಅನರ್ಹರ 'BPL' ಕಾರ್ಡ್ ಗಳು ಮಾತ್ರ ವಾಪಾಸ್: CM ಸಿದ್ದರಾಮಯ್ಯ ಸ್ಪಷ್ಟನೆ

BIG NEWS : ಅನರ್ಹರ ‘BPL’ ಕಾರ್ಡ್ ಗಳು ಮಾತ್ರ ವಾಪಾಸ್: CM ಸಿದ್ದರಾಮಯ್ಯ ಸ್ಪಷ್ಟನೆ

ಬಾಗಲಕೋಟೆ: ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ವಾಪಾಸ್ ಪಡೆಯಬಹುದು. ಅರ್ಹರ ಕಾರ್ಡ್ ಗಳಿಗೆ ಯಾವುದೇ ತೊಂದರೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿವೆ ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಪಿಎಲ್ ಕಾರ್ಡ್ ಗಳು ರದ್ದಾಗುತ್ತಿಲ್ಲ. ಅನರ್ಹರ ಕಾರ್ಡ್ ಗಳನ್ನು ವಾಪಾಸ್ ಪಡೆಯಬಹುದು ಎನ್ನುವ ಆಲೋಚನೆ. ಇದಿನ್ನೂ ಆಹಾರ ಇಲಾಖೆ ಪರಿಶೀಲಿಸುತ್ತಿದೆ. ಇನ್ನೂ ಅಂತಿಮ ತೀರ್ಮಾನ ಆಗಿಲ್ಲ. ಅನರ್ಹರಿಗೆ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ ಎಂದು ತಿಳಿಸಿದರು.

ಆದಾಯ ತೆರಿಗೆ ಪಾವತಿಸುವವರಿಗೂ, ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಕೊಡಬೇಕಾ? ಎಂದ ಸಿಎಂ, ಯಾವ ಕಾರ್ಡ್ ಗಳೂ ರದ್ದಾಗುವುದಿಲ್ಲ. ಅನರ್ಹರಿಂದ ವಾಪಾಸ್ ಪಡೆಯಬಹುದು. ಅರ್ಹರು ವಂಚಿತರಾಗಬಾರದು ಅಷ್ಟೇ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular