ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ನಡೆಯುತ್ತಿದ್ದು, ದೆಹಲಿಯಿಂದ ವಾಪಾಸ್ ಆಗಿರುವ ಸಿಎಂ ಸಿದ್ದರಾಮಯ್ಯ ಸಂಪುಟ ಸಹೋದ್ಯೋಗಿಗಳಿಗಾಗಿ ಬ್ರೇಕ್ ಫಾಸ್ಟ್ ಮೀಟಿಂಗ್ ಕರೆದಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಎಲ್ಲಾ ಸಚಿವರು, ಸಂಪುಟ ಸಹೋದ್ಯೋಗಿಗಳಿಗಾಗಿ ಉಪಹಾರ ಕೂಟ ಆಯೋಜಿಸಿದ್ದು, ಸಿಎಂ ನಡೆ ತೀವ್ರ ಕುತೂಹಲ ಮೂಡಿಸಿದೆ.
ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ಕಾಂಗ್ರೆಸ್ ಹೈಕಮಾಂಡ್ ನಾಯಕರು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಣದೀಪ್ ಸಿಂಗ್ ಸುರ್ಜೇವಾಲಾ, ಕೆ.ಸಿ.ವೇಣುಗೋಪಾಲ್ ರಾಜ್ಯಕ್ಕೆ ಆಗಮಿಸಲಿದ್ದು, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಕೆಲ ಸಚಿವರ ಬದಲಾವಣೆ ನಿಟ್ಟಿನಲ್ಲಿ ಮಹತ್ವದ ಚರ್ಚೆ ನಡೆಲಿದ್ದಾರೆ ಎಂದು ತಿಳಿದುಬಂದಿದೆ.
ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಸಂಪುಟದ ಸಹೋದ್ಯೋಗಿಗಳಿಗೆ ಇಂದು ಉಪಹಾರ ಕೂಟ ಆಯೋಜಿಸಿರುವುದು ಇನ್ನಷ್ಟು ಕುತೂಹಲ ಮೂಡಿಸಿದೆ.
