HomeKarnatakaBUDGET BREAKING: ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ: ಬಜೆಟ್ ಮಂಡನೆಗೆ ಅನುಮೋದನೆ

BUDGET BREAKING: ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ಆರಂಭ: ಬಜೆಟ್ ಮಂಡನೆಗೆ ಅನುಮೋದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ವಿಶೇಷ ಸಚಿವ ಸಂಪುಟ ಸಭೆ ನಡೆದಿದೆ.

ಸಿಎಂ ಸಿದ್ದರಾಮಯ್ಯ ಇಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆಗೆ ಅನುಮೋದನೆ ಪಡೆಯುವ ನಿಟ್ಟಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ ಕರೆದಿದ್ದಾರೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ಆರಂಭವಾಗಿದೆ.

ಸಚಿವ ಸಂಪುಟ ಸಭೆಯಲ್ಲಿ ಪ್ರಸಕ್ತ ಸಾಲಿನ ಬಜೆಟ್ ಮಂಡನೆಗೆ ಅನುಮೋದನೆ ದೊರೆತಿದೆ. ಎಲ್ಲಾ ಸಚಿವರು ಬಜೆಟ್ ಮಂಡನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಶುಭಕೋರಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular