HomeKarnatakaBIG NEWS: ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

BIG NEWS: ಉಪಚುನಾವಣೆಯಲ್ಲಿ 3 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಗೆಲುವು ನಿಶ್ಚಿತ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ಚಳ್ಳಕೆರೆ: ಉಪಚುನಾವಣಾ ಅಖಾಡ ರಂಗೇರಿದ್ದು, ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ ಎಂದು ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಳ್ಳಕೆರೆ ನಗರದಲ್ಲಿ ಮಾತನಡಿದ ಸಿಎಂ ಸಿದ್ದರಾಮಯ್ಯ, ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿನ ಬಗ್ಗೆ ನೂರಕ್ಕೆ ನೂರರಷ್ಟು ವಿಶ್ವಾಸವಿದ್ದು, ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದ್ದೇವೆ ಎಂದರು.

ಬಿಜೆಪಿ ಶಾಸಕ ಯತ್ನಾಳ್ ಅವರು ಅಹಿಂದ ವರ್ಗದ ಹಣವನ್ನು ಕಾಂಗ್ರೆಸ್ ಲೂಟಿ ಮಾಡಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, 1000 ಕೋಟಿ ಬಳಸಿ ಕಾಂಗ್ರೆಸ್ ಸರ್ಕಾರವನ್ನು ಉರುಳಿಸಲಿದೆ ಎಂದು ಯತ್ನಾಳ್ ಅವರು ಹೇಳಿದ್ದರು. ಅವರು ಹೇಳುವ ಸಾವಿರ ಕೋಟಿ ಯಾರ ಹಣ, ಇದು ಕಪ್ಪು ಹಣ ಇರಬಹುದಲ್ಲವೇ. ಬಿಜೆಪಿಯವರು ಲಂಚದಿಂದ ಬರುವ ಈ ಕಪ್ಪು ಹಣ ಬಳಸಿ ಸರ್ಕಾರ ಉರುಳಿಸುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷ ಸಿ.ಪಿ.ಯೋಗೇಶ್ವರ್ ಅವರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಜೆಡಿಎಸ್ ಅವರು ಆರೋಪಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೊದಲು ಚನ್ನಪಟ್ಟಣ ಕ್ಷೇತ್ರಕ್ಕೆ ಬಿಜೆಪಿ ಜೆಡಿಎಸ್ ನವರು ಅಭ್ಯರ್ಥಿಯನ್ನು ಆಯ್ಕೆ ಮಾಡಲಿ . ಚನ್ನಪಟ್ಟಣ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯನ್ನು ಸಧ್ಯದಲ್ಲಿಯೇ ಆಯ್ಕೆ ಅಂತಿಮ ಗೊಳಿಸಲಾಗುವುದು ಎಂದರು.

For Latest News Updates, Join Our Whatsapp Community🚩
RELATED ARTICLES

Most Popular